ದೆಹಲಿ: ನನಗೆ 70 ವರ್ಷ ಮೀರಿದೆ. ನನ್ನ ಬದಲಿಗೆ ಯುವಕರಿಗೆ ಕೋವಿಡ್ ಲಸಿಕೆ ನೀಡಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
'ನೀವು ಲಸಿಕೆ ಪಡೆಯುತ್ತೀರಾ?' ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಖರ್ಗೆ, 'ನಾನು 70 ವರ್ಷಕ್ಕಿಂತ ಮೇಲ್ಪಟ್ಟವನು. ನನಗಿಂತಲೂ ಹೆಚ್ಚಿನ ಆಯುಷ್ಯ ಹೊಂದಿರುವ ಯುವಕರಿಗೆ ಕೋವಿಡ್ ಲಸಿಕೆಯನ್ನು ನೀಡಬೇಕು. ನನಗಿನ್ನು 10-15 ವರ್ಷ ಜೀವನ ಇರಬಹುದಷ್ಟೇ,' ಎಂದು ಹೇಳಿದರು.
ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗಿರುವ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆಯನ್ನು ಪ್ರಧಾನಿ ಮೋದಿ ದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಹಾಕಿಸಿಕೊಂಡರು.
ಇದರ ಬೆನ್ನಿಗೇ, ಬಿಹಾರ ಸಿಎಂ ನಿತೀಶ್ ಕುಮಾರ್, ಒಡಿಶಾ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಲಸಿಕೆ ಹಾಕಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.