
ರಶ್ಮಿಕಾ ಮಂದಣ್ಣ, ಕರ್ನೂಲ್ ಬಸ್ ದುರಂತ
ಬೆಂಗಳೂರು: ಕಳೆದ ಶುಕ್ರವಾ ನಡೆದ ಕರ್ನೂಲ್ ಖಾಸಗಿ ಬಸ್ ದುರಂತದ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಕರ್ನೂಲ್ ಬಸ್ ದುರಂತವನ್ನು ನೆನೆದು ನನ್ನ ಹೃದಯ ಭಾರವಾಗಿದೆ. ಆ ಭಯಾನಕ ದುರಂತ ನಡೆಯಬಾರದಿತ್ತು ಎಂದು ಹೇಳಿದ್ದಾರೆ.
ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮೃತರಿಗೆ ಸಂತಾಪ ಸೂಚಿಸಿರುವ ನಟಿ, ಹೊತ್ತಿ ಉರಿದ ಆ ಬಸ್‌ನಲ್ಲಿ ಆ ಸಂದರ್ಭದಲ್ಲಿ ಪ್ರಯಾಣಿಕರು ಏನೆಲ್ಲ ಸಂಕಟ ಅನುಭವಿಸಿದರು ಎಂಬುದನ್ನು ಊಹಿಸಿಕೊಳ್ಳುವುದೂ ಕಷ್ಟ ಎಂದು ಕಣ್ಣೀರಿಟ್ಟಿದ್ದಾರೆ.
ಇದೊಂದು ವಿನಾಶಕಾರಿ ದುರಂತವಾಗಿತ್ತು. ಮುಂದೆ ಇಂತಹ ಘಟನೆಗಳು ನಡೆಯಬಾರದು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಹಾಗೂ ದುರಂತದಲ್ಲಿ ಮಡಿದವರಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕರ್ನೂಲ್ ಬಳಿ ಕಾವೇರಿ ಟ್ರಾವೆಲ್ಸ್‌ನ ಖಾಸಗಿ ಬಸ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿತ್ತು. ಅದರಲ್ಲಿದ್ದ 20 ಪ್ರಯಾಣಿಕರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.