ADVERTISEMENT

ಬರ ಪ್ರದೇಶದ ರೈತರನ್ನು ಭೇಟಿ ಮಾಡುವಂತೆ ಸಂಜೀವ್‌ ಪುರಿಗೆ ತಿಳಿಸಿರುವೆ: ನಿರ್ಮಲಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2023, 12:55 IST
Last Updated 24 ನವೆಂಬರ್ 2023, 12:55 IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌    

ನವದೆಹಲಿ: ಕರ್ನಾಟಕದ ಬರಪೀಡಿತ ಪ್ರದೇಶದ ರೈತರನ್ನು ಭೇಟಿ ಮಾಡುವಂತೆ ಐಟಿಸಿಯ ಸಿಎಂಡಿ ಸಂಜೀವ್‌ ಪುರಿ ಅವರಿಗೆ ತಿಳಿಸಿದ್ದೇನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. 

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರು ಕನ್ನಡದಲ್ಲೇ ಪೋಸ್ಟ್‌ ಮಾಡಿದ್ದಾರೆ.

‘ಕರ್ನಾಟಕದ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಗುರುವಾರ ನನ್ನನ್ನು ಭೇಟಿಯಾಗಿ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಸಚಿವರಿಗೆ ತಿಳಿಸಲಾಗಿದೆ’ ಎಂದು ಹೇಳಿದ್ದಾರೆ. 

ಇದೇ ವೇಳೆ  ‘ಶ್ರೀ ಅನ್ನ’ (ಸಿರಿಧಾನ್ಯ) ಖರೀದಿ ಬಗ್ಗೆಯೂ ಸಂಜೀವ್‌ ಪುರಿ ಅವರಿಗೆ ಸಲಹೆ ನೀಡಿದ್ದೇನೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.