ಬಂಧನ
(ಪ್ರಾತಿನಿಧಿಕ ಚಿತ್ರ)
ಮುಂಬೈ: ‘ಐ ಲವ್ ಮಹಮ್ಮದ್’ ಎಂದು ಬರೆದಿರುವುದನ್ನು ವಿರೋಧಿಸಿ ಮಹಾರಾಷ್ಟ್ರದ ಅಹಲ್ಯಾನಗರದ ರಸ್ತೆಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಕಾರಣ ಪೊಲೀಸರು ಸೋಮವಾರ ಲಾಠಿ ಪ್ರಹಾರ ನಡೆಸಿದ್ದಾರೆ.
ಪ್ರತಿಭಟನೆ, ರಸ್ತೆ ತಡೆ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕನಿಷ್ಠ 30 ಜನರನ್ನು ಬಂಧಿಸಲಾಗಿದೆ ಎಂದು ಅಹಲ್ಯಾನಗರ (ಅಹ್ಮದ್‌ನಗರ) ಎಸ್‌ಪಿ ಸೋಮನಾಥ್ ಘಾರ್ಗೆ ತಿಳಿಸಿದರು.
ಕೋತ್ವಾಲಿಯ ಕೋಟ್ಲಾದಲ್ಲಿ ‘ಐ ಲವ್ ಮುಹಮ್ಮದ್’ ಎಂದು ರಸ್ತೆ ಮೇಲೆ ಸೋಮವಾರ ಯಾರೋ ಬರೆದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮುಸ್ಲಿಂ ಸಮುದಾಯ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.
ಬರಹಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು ಕೂಡ ಕೆಲವರು ಪ್ರತಿಭಟನೆ ಮುಂದುವರಿಸಿದ್ದಾರೆ.
ಬಳಿಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಪೊಲೀಸರು ತಿಳಿಸುತ್ತಿದ್ದಂತೆ ಕಲ್ಲು ತೂರಾಟ ಮಾಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.