ಮುಜಫ್ಫರ್‌ನಗರ: ‘ಐ ಲವ್ ಮುಹಮ್ಮದ್’ ಘಟನೆಗೆ ಸಂಬಂಧಿಸಿದ ಆಕ್ಷೇಪಾರ್ಹ ಮತ್ತು ವಿವಾದಾತ್ಮಕ ವಿಡಿಯೊ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮುಜಫ್ಫರ್‌ನಗರ ನಿವಾಸಿ ನದೀಮ್ ಬಂಧಿತ ಆರೋಪಿ. ವಿಡಿಯೊದಲ್ಲಿ ನದೀಮ್ ಉದ್ದೇಶಪೂರ್ವಕವಾಗಿ ಬೆದರಿಕೆ ಹಾಕಿದ್ದಾರೆ.
‘ಕೆಲ ದಿನಗಳ ಹಿಂದೆ, ಜನರನ್ನು ಪ್ರಚೋದಿಸುವಂತಹ ಆಕ್ಷೇಪಾರ್ಹ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಈ ಬಗ್ಗೆ ಪ್ರಕರಣ ದಾಖಲಿಸಿ, ಆರೋಪಿ ಪತ್ತೆಗೆ ತಂಡ ರಚಿಸಲಾಯಿತು’ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
‘ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.