ADVERTISEMENT

ರೈಲ್ವೆ ಹಳಿಯಿಂದ ಜೀವನ ಆರಂಭ; ಎಷ್ಟು ಕೆಟ್ಟದ್ದಾಗಿತ್ತು ಎಂದು ಗೊತ್ತು: ಮೋದಿ

ಪಿಟಿಐ
Published 12 ಮಾರ್ಚ್ 2024, 5:50 IST
Last Updated 12 ಮಾರ್ಚ್ 2024, 5:50 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಪಿಟಿಐ ಸಂಗ್ರಹ ಚಿತ್ರ)

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ₹85,000 ಕೋಟಿ ಮೊತ್ತದ ರೈಲ್ವೆ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೇರವೇರಿಸಿದ್ದಾರೆ.

ADVERTISEMENT

ಈ ವೇಳೆ ಮಾತನಾಡಿದ ಅವರು, 'ರೈಲ್ವೆ ಹಳಿಯಿಂದಲೇ ನಾನು ನನ್ನ ಜೀವನ ಆರಂಭಿಸಿದ್ದೇನೆ. ಹಾಗಾಗಿ ಹಿಂದೆ ರೈಲ್ವೆ ಎಷ್ಟು ಕೆಟ್ಟದಾಗಿತ್ತು ಎಂಬುದು ನನಗೆ ಗೊತ್ತಿದೆ' ಎಂದು ಹೇಳಿದ್ದಾರೆ.

'ನಮ್ಮ ಸರ್ಕಾರವು ದೇಶವನ್ನು ಕಟ್ಟುವ ಧ್ಯೇಯೋದ್ದೇಶದಿಂದ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದೆಯೇ ಹೊರತು ಚುನಾವಣೆಯನ್ನು ಗುರಿಯಾಗಿಸಿಕೊಂಡು ಅಲ್ಲ' ಎಂದು ಅವರು ಹೇಳಿದ್ದಾರೆ.

'ಕೆಲವರು ನಮ್ಮ ಪ್ರಯತ್ನವನ್ನು ಚುನಾವಣೆ ದೃಷ್ಟಿಯಿಂದ ನೋಡಲು ಪ್ರಯತ್ನಿಸುತ್ತಾರೆ. ಆದರೆ ಹಿಂದಿನ ತಲೆಮಾರಿನವರು ಅನುಭವಿಸಿದ ತೊಂದರೆಗಳನ್ನು ನಮ್ಮ ಮುಂದಿನ ಪೀಳಿಗೆ ಎದುರಿಸಬಾರದು ಎಂದು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಇದುವೇ ಮೋದಿಯ ಗ್ಯಾರಂಟಿ' ಎಂದು ಹೇಳಿದ್ದಾರೆ.

'ಕಳೆದ 10 ವರ್ಷಗಳಲ್ಲಿ ರೈಲ್ವೆಯ ಅಭಿವೃದ್ಧಿಗಾಗಿ ಹಿಂದೆ ಮಾಡಿದ್ದಕ್ಕಿಂತ ಆರು ಪಟ್ಟು ಹೆಚ್ಚು ಹಣವನ್ನು ವಿನಿಯೋಗಿಸಿದ್ದೇವೆ' ಎಂದು ಅವರು ಉಲ್ಲೇಖಿಸಿದ್ದಾರೆ.

'2024ರಲ್ಲಿ ಕೇವಲ ಎರಡು ತಿಂಗಳಲ್ಲಿ ನಾವು ₹11 ಲಕ್ಷ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದೇವೆ' ಎಂದು ಅವರು ತಿಳಿಸಿದ್ದಾರೆ.

'ರೈಲ್ವೆ ಅಭಿವೃದ್ಧಿಗಾಗಿ ಸರ್ಕಾರದ ಹಣವನ್ನು ಬಳಸಿಕೊಳ್ಳುವ ಉದ್ದೇಶದಿಂದ ಪ್ರತ್ಯೇಕ ರೈಲ್ವೆ ಬಜೆಟ್ ಅನ್ನು ರದ್ದುಗೊಳಿಸಿ ಕೇಂದ್ರ ಬಜೆಟ್‌ನಲ್ಲಿ ವಿಲೀನಗೊಳಿಸಲಾಯಿತು' ಎಂದು ಅವರು ಪ್ರತಿಪಾದಿಸಿದ್ದಾರೆ.

350 'ಆಸ್ತಾ' ರೈಲಿನಿಂದಾಗಿ ಈವರೆಗೆ 4.5 ಲಕ್ಷ ಮಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲು ಅನುಕೂಲವಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಬೆಂಗಳೂರು-ಕಲಬುರಗಿ, ಮೈಸೂರು-ಚೆನ್ನೈ ಸೇರಿದಂತೆ 10 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ನಾಲ್ಕು ವಂದೇ ಭಾರತ್ ರೈಲುಗಳ ವಿಸ್ತರಣೆಗೂ ಮೋದಿ ಹಸಿರು ನಿಶಾನೆ ನೀಡಿದ್ದಾರೆ. ಇದರಲ್ಲಿ ತಿರುವನಂತಪುರ-ಕಾಸರಗೋಡು ವಂದೇ ಭಾರತ್ ರೈಲು ಅನ್ನು ಮಂಗಳೂರಿಗೆ ವಿಸ್ತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.