ADVERTISEMENT

ತಾಂತ್ರಿಕ ದೋಷ: ಮಧ್ಯಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಅಕ್ಟೋಬರ್ 2023, 9:14 IST
Last Updated 1 ಅಕ್ಟೋಬರ್ 2023, 9:14 IST
<div class="paragraphs"><p>ಭೋಪಾಲ್‌ನ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.</p></div>

ಭೋಪಾಲ್‌ನ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.

   

ಭೋಪಾಲ್: ತಾಂತ್ರಿಕ ದೋಷದಿಂದಾಗಿ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಹಳ್ಳಿಯೊಂದರಲ್ಲಿ ಇಂದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಎಎಫ್‌ನ III ಎಚ್‌ಯು ಘಟಕದ ಹೆಲಿಕಾಪ್ಟರ್ ಭೋಪಾಲ್ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಡುಂಗರಿಯಾ ಗ್ರಾಮದ ಸರೋವರದ ಬಳಿಯ ಕಬ್ಬಿನ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ADVERTISEMENT

ಪೈಲಟ್ ಮತ್ತು ಐವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಸ್ಥಳದಲ್ಲಿದ್ದ ಬೆರಾಸಿಯಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನರೇಂದ್ರ ಕುಲಸ್ತೆ ತಿಳಿಸಿದ್ದಾರೆ.

ಭೋಪಾಲ್‌ನಿಂದ ಝಾನ್ಸಿಗೆ ತೆರಳುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.