ADVERTISEMENT

ಸೇನಾ ಮುಖ್ಯಸ್ಥರ ಸಮಿತಿ ಅಧ್ಯಕ್ಷರಾಗಿ ಧನೋಆ ನೇಮಕ

ಪಿಟಿಐ
Published 29 ಮೇ 2019, 18:01 IST
Last Updated 29 ಮೇ 2019, 18:01 IST
ಬಿ.ಎಸ್‌.ಧನೊಆ
ಬಿ.ಎಸ್‌.ಧನೊಆ   

ನವದೆಹಲಿ: ವಾಯುಪಡೆ ಮುಖ್ಯಸ್ಥ ಬಿ.ಎಸ್‌.ಧನೊಆ ಅವರು ಮೂರು ಸೇನೆಗಳ ಮುಖ್ಯಸ್ಥರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

‘ಈ ಸಮಿತಿಯ ಮುಖ್ಯಸ್ಥರಾಗಿದ್ದ ನೌಕಾಪಡೆಯ ಚೀಫ್‌ ಅಡ್ಮಿರಲ್‌ ಸುನೀಲ್‌ ಲಾಂಬಾ ಅವರು ಶುಕ್ರವಾರ ನಿವೃತ್ತರಾಗಲಿದ್ದಾರೆ. ಲಾಂಬಾ ಅವರು ಧನೋಆ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. ಮೇ 31ರಿಂದ ಧನೋಆ ಅವರ ಅಧಿಕಾರಾವಧಿ ಆರಂಭವಾಗಲಿದೆ’ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT