ವಿಮಾನ ಪತನವಾಗಿರುವ ದೃಶ್ಯ
–ಪಿಟಿಐ ಚಿತ್ರ
ಗ್ವಾಲಿಯರ್: ಭಾರತೀಯ ವಾಯುಸೇನೆಯ ಮೀರಜ್–2000 ಯುದ್ಧ ವಿಮಾನವು ತಾಂತ್ರಿಕ ದೋಷದಿಂದಾಗಿ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಗುರುವಾರ ಪತನಗೊಂಡಿದೆ.
ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.
‘ಯುದ್ಧ ವಿಮಾನವು ಮಧ್ಯಾಹ್ನ 2.40ಕ್ಕೆ ಬರ್‌ಹೆತ್ ಸನಿ ಗ್ರಾಮದ ಕೃಷಿಭೂಮಿಯೊಂದರಲ್ಲಿ ಬಿದ್ದಿದ್ದು, ಬಳಿಕ ಬೆಂಕಿಗಾಹುತಿಯಾಗಿದೆ. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ’ ಎಂದು ವಕ್ತಾರರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.