ಜಾಗ್ವಾರ್ ಯುದ್ಧ ವಿಮಾನ ಅಪಘಾತ:
ಜಾಮ್‌ನಗರ: ವಾಯುಪಡೆಗೆ ಸೇರಿದ ಜಾಗ್ವಾರ್ ಯುದ್ಧ ವಿಮಾನವು ಗುಜರಾತ್‌ನ ವಾಯುಪಡೆ ನೆಲೆಗೆ ಹತ್ತಿರವಿರುವ ಸುವರ್ದ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಪೈಲಟ್‌ಗಳು ತರಬೇತಿ ಕಾರ್ಯದಲ್ಲಿ ತೊಡಗಿರುವಾಗ ಅವಘಡ ಸಂಭವಿಸಿದೆ.
ಯುದ್ಧ ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು. ಒಬ್ಬರು ಸುರಕ್ಷಿತವಾಗಿ ಇಳಿದಿದ್ದು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ. ಗ್ರಾಮದ ಬಯಲು ಪ್ರದೇಶದಲ್ಲಿ ಅವಘಡ ಸಂಭವಿಸಿದೆ ಎಂದು ಜಿಲ್ಲಾ ಎಸ್‌ಪಿ ಪ್ರೇಮ್‌ಸುಖು ದೇಲು ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ವಿಮಾನವು ನೆಲಕ್ಕೆ ಅಪ್ಪಳಿಸಿದ ಹಿಂದೆಯೇ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆ ಆಗಿರುವ ಪೈಲಟ್‌ಗಾಗಿ ಶೋಧ ನಡೆದಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.