ಕಾನ್ಪುರ: ಇಲ್ಲಿನ ಚಕೇರಿ ಪ್ರದೇಶದಲ್ಲಿರುವ ಮಾವೈಯ್ಯಾ ಪೋಸ್ಟ್‌ನಲ್ಲಿ ಕರ್ತವ್ಯ ನಿರತ ಭಾರತೀಯ ವಾಯುಪಡೆಯ (ಐಎಎಫ್) ಸಿಬ್ಬಂದಿಯೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ ಅಧಿಕಾರಿ ತಿಳಿಸಿದ್ದಾರೆ.
ಕೇರಳ ಮೂಲದ ಕಾರ್ಪೊರಲ್ ವಿನಿಲ್ ಪಿ ಪಾಥ್ರೋಬ್ ಆತ್ಯಹತ್ಯೆ ಮಾಡಿಕೊಂಡವರು. ಸೋಮವಾರ ಕರ್ತವ್ಯ ನಿರ್ವಹಿಸುವ ವೇಳೆ ಅವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಸ್‌ಎಚ್‌ಒ ರವಿ ಶ್ರೀವಾಸ್ತವ್ ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಮರಣೋತ್ತರ ಪರೀಕ್ಷೆ ನಂತರ ಸಂಬಂಧಿಸಿದವರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.