ADVERTISEMENT

ಅತ್ಯಾಚಾರ ಆರೋಪದಲ್ಲಿ ಐಎಎಸ್‌ ಅಧಿಕಾರಿ ಜಿತೇಂದ್ರ ನರೈನ್‌ ಅಮಾನತು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2022, 15:53 IST
Last Updated 17 ಅಕ್ಟೋಬರ್ 2022, 15:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್‌ನ ಮಾಜಿ ಮುಖ್ಯಕಾರ್ಯದರ್ಶಿ, ಐಎಎಸ್ ಅಧಿಕಾರಿ ಜಿತೇಂದ್ರ ನರೈನ್‌ಅವರನ್ನು ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.

21 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಅಕ್ಟೋಬರ್ 16 ರಂದು ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರಿಂದ ವರದಿ ಪಡೆದಿರುವುದಾಗಿ ಗೃಹ ಸಚಿವಾಲಯ ಸೋಮವಾರ ತಿಳಿಸಿದೆ. 1990ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜಿತೇಂದ್ರ ನರೈನ್‌ ವಿರುದ್ಧ ಅತ್ಯಂತ ಗಂಭೀರ ಆರೋಪಗಳು ಕೇಳಿಬಂದಿವೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮುಖ್ಯ ಕಾರ್ಯದರ್ಶಿಯಾಗಿದ್ದ ಜಿತೇಂದ್ರ ನರೈನ್‌ ಅವರು ಗಂಭೀರ ದುರ್ನಡತೆ ಆರೋಪ ಎದುರಿಸುತ್ತಿದ್ದಾರೆ. ಸರ್ಕಾರಿ ಹುದ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ. ಇದಾದ ಬಳಿಕ ಗೃಹ ಸಚಿವಾಲಯ ಜಿತೇಂದ್ರ ನರೈನ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದು, ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಿದೆ.

ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರ ಎಸ್‌ಐಟಿ ಕಾನೂನು ಕ್ರಮಕ್ಕೆ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.