ADVERTISEMENT

ಗುಜರಾತ್: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಅಮಾನತು

ಪಿಟಿಐ
Published 5 ಜನವರಿ 2026, 14:54 IST
Last Updated 5 ಜನವರಿ 2026, 14:54 IST
<div class="paragraphs"><p>ಅಮಾನತು</p></div>

ಅಮಾನತು

   

ಅಹಮದಾಬಾದ್‌: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಗುಜರಾತ್‌ನ ಸುರೇಂದ್ರ ನಗರದ ಹಿಂದಿನ ಜಿಲ್ಲಾಧಿಕಾರಿಯೂ ಆಗಿರುವ ಐಎಎಸ್‌ ಅಧಿಕಾರಿ ರಾಜೇಂದ್ರ ಕುಮಾರ್‌ ಪಟೇಲ್‌ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

‘48 ಗಂಟೆವರೆಗೆ ಬಂಧನದಲ್ಲಿ ಇದ್ದ ಕಾರಣ ಅಖಿಲ ಭಾರತ ಸೇವೆಗಳು (ಶಿಸ್ತು ಮತ್ತು ಮನವಿ) ನಿಯಮಗಳ ಅನ್ವಯ ರಾಜೇಂದ್ರ ಕುಮಾರ್‌ ಪಟೇಲ್‌ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಭಾನುವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಭೂ ಬಳಕೆ ಬದಲಾವಣೆ ಅರ್ಜಿಗಳನ್ನು ಅನುಮೋದಿಸಲು ಪಟೇಲ್‌ ಅವರು ಒಂದು ಚದರ ಮೀಟರ್‌ಗೆ ₹5ರಿಂದ ₹10 ಲಂಚ ಪಡೆದುಕೊಳ್ಳುತ್ತಿದ್ದರು ಎಂಬ ಆರೋಪವಿದೆ. ಜ. 2ರಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಇವರನ್ನು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.