
ಪಿಟಿಐ
ನವದೆಹಲಿ: ಭಾರತೀಯ ಆಡಳಿತ ಸೇವೆಯ(ಐಎಎಸ್) ಅಧಿಕಾರಿಗಳು ಸಕಾಲದಲ್ಲಿ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಎಲ್ಲ ಅಧಿಕಾರಿಗಳು ಮುಂದಿನ ಜನವರಿ 31ರೊಳಗಾಗಿ ಸ್ಥಿರಾಸ್ತಿಯ ವಿವರಗಳನ್ನು ಸಲ್ಲಿಸಬೇಕು ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಮುಂದಿನ ವೇತನ ಶ್ರೇಣಿಗೆ ನೌಕರರನ್ನು ಪರಿಗಣಿಸಬೇಕಾದರೆ ಸ್ಥಿರಾಸ್ತಿಗಳ ವಿವರ ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.