ADVERTISEMENT

‘ಕನ್ನಡದಲ್ಲಿ ಬ್ಯಾಂಕ್ ಪರೀಕ್ಷೆ ಪರಿಶೀಲನೆ’

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 19:45 IST
Last Updated 27 ಜೂನ್ 2019, 19:45 IST
   

ನವದೆಹಲಿ (ಪಿಟಿಐ): ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪರೀಕ್ಷೆಗಳನ್ನು ಸ್ಥಳೀಯ ಭಾಷೆಯಲ್ಲಿಯೇ ನಡೆಸುವಂತೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಮನವಿ ಪರಿಶೀಲಿಸುತ್ತಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರಅವಧಿಯ ಬಳಿಕ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಜಿ.ಸಿ. ಚಂದ್ರಶೇಖರ್ ಅವರಿಗೆ ಸಚಿವರು ಉತ್ತರಿಸಿದರು.

ಸ್ಥಳೀಯ ಅಭ್ಯರ್ಥಿಗಳಿಗೆ ಅನುಕೂಲ ವಾಗುವಂತೆಬ್ಯಾಂಕ್ ಪರೀಕ್ಷೆಗಳನ್ನು ಇಂಗ್ಲಿಷ್, ಹಿಂದಿ ಜೊತೆ ಕನ್ನಡ ಭಾಷೆಯಲ್ಲೂ ನಡೆಸುವಂತೆ ಚಂದ್ರಶೇಖರ್ ಅವರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನಿರ್ಮಲಾ, ‘ಲೋಕಸಭೆ ಸದಸ್ಯರೂ ಈ ವಿಚಾರವಾಗಿ ತಮಗೆ ಮನವಿ ಸಲ್ಲಿಸಿದ್ದಾರೆ’ ಎಂದರು.

ADVERTISEMENT

‘ವಿಷಯ ಗಂಭೀರ ಸ್ವರೂಪದ್ದಾಗಿದೆ. ಈ ಬಗ್ಗೆ ಅಗತ್ಯ ಪರಿಶೀಲನೆ ನಡೆಸಿ ಸದನದಲ್ಲಿ ಮತ್ತೆ ಉತ್ತರಿಸುತ್ತೇನೆ’ ಎಂದು ಅವರು ಭರವಸೆ ನೀಡಿದರು.

ಚಂದ್ರಶೇಖರ್ ಅವರು ಕನ್ನಡದಲ್ಲಿ ಮಾತನಾಡಿದ ಕಾರಣ ಅದನ್ನು ತರ್ಜುಮೆ ಮಾಡುವ ವ್ಯವಸ್ಥೆ ಇರಲಿಲ್ಲ. ಸಭಾಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರು ಸಂಸದರ ಪ್ರಶ್ನೆಯನ್ನು ವಿವರಿಸಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.