ADVERTISEMENT

ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿಯಲ್ಲಿ ಸ್ಫೋಟಕ ಪತ್ತೆ: ತಪ್ಪಿದ ಅನಾಹುತ

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 6:24 IST
Last Updated 11 ಜೂನ್ 2022, 6:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ–ಬಾರಾಮುಲ್ಲಾ ಹೆದ್ದಾರಿಯಲ್ಲಿ ಭದ್ರತಾ ಪಡೆಗಳು ಸ್ಫೋಟಕ (ಐಇಡಿ) ವಶಪಡಿಸಿಕೊಂಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಿದ್ದಾರೆ.

ಸಂಗ್ರಾಮ ಹೆದ್ದಾರಿಯಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಕೆಲಕಾಲ ನಿರ್ಬಂಧಿಸಲಾಗಿತ್ತು.

ಸೇನೆಯ ‘‘5 ರಾಷ್ಟ್ರೀಯ ರೈಫಲ್ಸ್’ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಾರಾಮುಲ್ಲಾ ಜಿಲ್ಲೆಯ ಸಂಗ್ರಾಮದ ಪುಟ್ಖಾ ಎಂಬಲ್ಲಿ ಸ್ಫೋಟಕವನ್ನು ವಶಪಡಿಸಿಕೊಂಡಿದ್ದಾರೆ. ಅದನ್ನು ನಿಷ್ಕ್ರಿಯಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.