ADVERTISEMENT

ಡಿಎಂಕೆ ಮೈತ್ರಿ ಕಡಿದುಕೊಂಡರೆ ಕಾಂಗ್ರೆಸ್‌ನೊಂದಿಗೆ ಕೈಜೋಡಿಸುವೆ: ಕಮಲ್‌ ಹಾಸನ್

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2018, 9:14 IST
Last Updated 13 ಅಕ್ಟೋಬರ್ 2018, 9:14 IST
   

ಚೆನ್ನೈ: ಒಂದುವೇಳೆ ಕಾಂಗ್ರೆಸ್‌ ಪಕ್ಷವು ಡಿಎಂಕೆ ಜೊತೆಗಿನ ಮೈತ್ರಿ ಕಳೆದುಕೊಳ್ಳುವುದಾದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಆ ಪಕ್ಷದ(ಕಾಂಗ್ರೆಸ್‌) ಜೊತೆ ಕೈ ಜೋಡಿಸವುದಾಗಿ ನಟ ಹಾಗೂ ಮಕ್ಕಳ್‌ ನೀಧಿ ಮೈಯಮ್‌(ಎಂಎನ್ಎಂ) ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ ತಿಳಿಸಿದ್ದಾರೆ.

ತಂತಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ತಮಿಳುನಾಡಿನ ಜನರಿಗೆ ನೆರವಾಗುವ ಸಲುವಾಗಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಹೇಳಿದ್ದಾರೆ.ಕಾರ್ಯಕ್ರಮದಲ್ಲಿ ತಮಿಳುನಾಡು ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ.

ಕಳೆದ ಜೂನ್‌ ತಿಂಗಳಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದ ಕಮಲ್‌, ತಮಿಳುನಾಡಿನ ರಾಜಕೀಯ ಸ್ಥಿತಿಗತಿಯ ಬಗ್ಗೆ ಚರ್ಚಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.