ವೀಸಾ (ಪ್ರಾತಿನಿಧಿಕ ಚಿತ್ರ)
ನವದೆಹಲಿ: ‘ತರಗತಿಗಳಿಗೆ ಗೈರುಹಾಜರಾದರೆ, ಕೋರ್ಸ್ ಅನ್ನು ಅರ್ಧದಲ್ಲಿಯೇ ನಿಲ್ಲಿಸಿದರೆ ಅಥವಾ ಕೋರ್ಸ್‌ನಿಂದ ಹೊರಗುಳಿದರೆ ವಿದ್ಯಾರ್ಥಿ ವೀಸಾ ಹಿಂಪಡೆಯಲಾಗುತ್ತದೆ’ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಕಚೇರಿಯು ಮಂಗಳವಾರ ವಿದೇಶಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದೆ.
ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ರಾಯಭಾರ ಕಚೇರಿಯು ಯಾವುದೇ ಸಮಸ್ಯೆ ಆಗದಂತೆ ಕೋರ್ಸ್ ಪೂರ್ಣಗೊಳಿಸಬೇಕು ಎಂದು ಸಲಹೆ ಮಾಡಿದೆ.
ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾರತದ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುತ್ತಾರೆ. 2023ರಲ್ಲಿ 1.40 ಲಕ್ಷ ಭಾರತದ ವಿದ್ಯಾರ್ಥಿಗಳಿಗೆ ಅಮೆರಿಕ ಕಾನ್ಸುಲೇಟ್ ವೀಸಾ ನೀಡಿತ್ತು. ಸತತ ಮೂರನೇ ವರ್ಷ ದಾಖಲೆ ಸಂಖ್ಯೆಯಲ್ಲಿ ವೀಸಾ ನೀಡಿದ್ದ ಹಿರಿಮೆಗೆ ಪಾತ್ರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.