ಕೋಲ್ಕತ್ತ(ಪಶ್ಚಿನ ಬಂಗಾಳ): ಕೋಲ್ಕತ್ತದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನಲ್ಲಿ (ಐಐಎಂ) ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಪ್ರಕರಣದ ಆರೋಪಿಗೆ(ವಿದ್ಯಾರ್ಥಿ) ನ್ಯಾಯಾಲಯ ಶನಿವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕೋಲ್ಕತ್ತ ಐಐಎಂನ ಆವರಣದಲ್ಲಿ ಇರುವ ಬಾಲಕರ ಹಾಸ್ಟೆಲ್‌ಗೆ ಕೌನ್ಸಿಲಿಂಗ್ ನೀಡಲು ತೆರಳಿದ್ದ ಮಹಿಳೆಯೊಬ್ಬರು ತಮ್ಮ ಮೇಲೆ ಐಐಎಂನ ವಿದ್ಯಾರ್ಥಿಯಿಂದಲೇ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಸಂತ್ರಸ್ತೆ ನೀಡಿದ ದೂರಿನ ಆಧಾರಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.
ಅಲಿಪೋರ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಧೀಶರು ಆರೋಪಿಗೆ ₹50,000 ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಆರೋಪಿತ ವಿದ್ಯಾರ್ಥಿ ತನ್ನ ಪಾಸ್‌ಪೋರ್ಟ್ ನ್ಯಾಯಾಲಯಕ್ಕೆ ಒಪ್ಪಿಸಬೇಕು. ಜತೆಗೆ ಅನುಮತಿಯಿಲ್ಲದೆ ರಾಜ್ಯವನ್ನು ಬಿಟ್ಟು ಹೋಗದಂತೆ ನ್ಯಾಯಾಲಯ ನಿರ್ದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.