ADVERTISEMENT

ಕೋಲ್ಕತ್ತ IIM ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಪಿಟಿಐ
Published 12 ಜುಲೈ 2025, 9:27 IST
Last Updated 12 ಜುಲೈ 2025, 9:27 IST
   

ಕೋಲ್ಕತ್ತ: ಕೋಲ್ಕತ್ತದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ(ಐಐಎಂ) ವಿದ್ಯಾರ್ಥಿನಿಯೊಬ್ಬಳ ಮೇಲೆ ಸಂಸ್ಥೆಯ ಆವರಣದಲ್ಲಿಯೇ ಅತ್ಯಾಚಾರ ನಡೆದಿದೆ.

‘ಕಾಲೇಜಿನ ಹುಡುಗರ ಹಾಸ್ಟೆಲ್‌ನ ಒಳಗೆ ಶುಕ್ರವಾರ ಕೃತ್ಯ ನಡೆದಿದೆ. ಸಂತ್ರಸ್ತೆಯು ನೀಡಿದ ದೂರಿನ ಆಧಾರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ಕೌನ್ಸಿಲಿಂಗ್‌ ನೆಪದಲ್ಲಿ ಯುವತಿಯನ್ನು ಹಾಸ್ಟೆಲ್‌ಗೆ ಕರೆಸಿಕೊಳ್ಳಲಾಗಿತ್ತು. ಅಲ್ಲಿ ನೀಡಿದ ‍ಪಾನೀಯ ಕುಡಿದ ಬಳಿಕ ಆಕೆ ಅಸ್ವಸ್ಥಗೊಂಡಿದ್ದರು. ಪ್ರಜ್ಞೆ ಬಂದಾಗ ತನ್ನ ಮೇಲೆ ಅತ್ಯಾಚಾರವಾಗಿರುವ ಬಗ್ಗೆ ಆಕೆಗೆ ಅರಿವಾಗಿರುವುದಾಗಿ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಪರಿಣಾಮವನ್ನು ಎದುರಿಸಬೇಕಾಗುತ್ತದೆ’ ಎಂದು ಆರೋಪಿಯು ಬೆದರಿಕೆ ಒಡ್ಡಿರುವುದಾಗಿಯೂ ಯುವತಿ ಆರೋಪಿಸಿದ್ದಾರೆ.

ಕೋಲ್ಕತ್ತದ ಕಾನೂನು ಕಾಲೇಜಿನ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸುಮಾರು ಹದಿನೈದು ದಿನಗಳ ನಂತರ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.