ADVERTISEMENT

ಐಐಟಿ-ಕಾನ್ಪುರ ವಿದ್ಯಾರ್ಥಿ ಆತ್ಮಹತ್ಯೆ

ಪಿಟಿಐ
Published 11 ಜನವರಿ 2024, 14:39 IST
Last Updated 11 ಜನವರಿ 2024, 14:39 IST
.
.   

ಪಿಟಿಐ

ಕಾನ್ಪುರ: ಕಾನ್ಪುರ ಐಐಟಿಯ ಎಮ್‌.ಟೆಕ್‌ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

‘ಮೀರತ್‌ನ ವಿಕಾಸ್‌ ಕುಮಾರ್‌ ಮೀನಾ ಅವರ ಶವವು ನೇಣುಹಾಕಿಕೊಂಡ ಸ್ಥಿತಿಯಲ್ಲಿ ಬುಧವಾರ ಕಂಡುಬಂದಿದೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಮ್‌.ಟೆಕ್‌ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ವಿಕಾಸ್‌ ಮೂರು ವಿಷಯಗಳಲ್ಲಿ ಅನುತ್ತೀರ್ಣವಾಗಿದ್ದರಿಂದ ತಾತ್ಕಾಲಿಕವಾಗಿ ಕೋರ್ಸ್‌ನಿಂದ ತೆಗೆದು ಹಾಕಲಾಗಿತ್ತು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.