ಕೋಲ್ಕತ್ತ: ಐಐಟಿ–ಖರಗ್‌ಪುರದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನ ತನ್ನ ಕೋಣೆಯೊಳಗೆ ಶವವಾಗಿ ಪತ್ತೆಯಾಗಿದ್ದಾನೆ.
ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನ ಮೂರನೇ ವರ್ಷದ ವಿದ್ಯಾರ್ಥಿ ಶಾನ್ ಮಲಿಕ್ ಮೃತ ಯುವಕ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಸತತವಾಗಿ ಕರೆ ಮಾಡಿದರೂ ಸ್ವೀಕರಿಸದಿದ್ದರಿಂದ ಅನುಮಾನಗೊಂಡ ಮಲಿಕ್‌ನ ಪೋಷಕರು ಹಾಸ್ಟೆಲ್‌ಗೆ ಬಂದು ಪರಿಶೀಲಿಸಿದಾಗ, ಕೋಣೆಯೊಳಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಂಸ್ಥೆಯು ಆಂತರಿಕ ತನಿಖೆ ಕೈಗೊಂಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.