ADVERTISEMENT

ಐಐಟಿ ಮದ್ರಾಸ್ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಸಾವು: ಆತ್ಮಹತ್ಯೆ ಶಂಕೆ

ಏಜೆನ್ಸೀಸ್
Published 10 ನವೆಂಬರ್ 2019, 7:28 IST
Last Updated 10 ನವೆಂಬರ್ 2019, 7:28 IST
ಐಐಟಿ ಮದ್ರಾಸ್‌ನ ವಿದ್ಯಾರ್ಥಿನಿ ಆತ್ಮಹತ್ಯೆ
ಐಐಟಿ ಮದ್ರಾಸ್‌ನ ವಿದ್ಯಾರ್ಥಿನಿ ಆತ್ಮಹತ್ಯೆ   

ಚೆನ್ನೈ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕ್ಯಾಂಪಸ್‌ನಲ್ಲಿರುವ ವಸತಿನಿಲಯದ ಕೊಠಡಿಯಲ್ಲಿವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಾಗಿರಬಹುದು ಎಂದುಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಫಾತೀಮಾ ಲತೀಫ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಕೂಡ ಪತ್ತೆಯಾಗಿಲ್ಲ. ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

2018ರ ಡಿಸೆಂಬರ್ ಬಳಿಕ ಈವರೆಗೆ ಐಐಟಿ ಮದ್ರಾಸ್‌ನಲ್ಲಿ ನಡೆದಿರುವ ಐದನೇ ಆತ್ಮಹತ್ಯೆ ಇದಾಗಿದೆ.

ADVERTISEMENT

ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗದ ಪ್ರಥಮ ವರ್ಷದಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ಫಾತಿಮಾ ಕ್ಯಾಂಪಸ್‌ನ ಸರಯೂ ವಸತಿನಿಲಯದಲ್ಲಿ ತಂಗಿದ್ದಳು.

ಶನಿವಾರ ಬೆಳಿಗ್ಗೆ ಪೋಷಕರುಫಾತೀಮಾ ಲತೀಫ್‌ಗೆ ದೂರವಾಣಿ ಕರೆ ಮಾಡಿದ್ದರು. ಆಕೆ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ ಪೋಷಕರು ಸ್ನೇಹಿತೆಯರ ಬಳಿ ವಿಚಾರಿಸಿದ್ದರು. ಅವರು ಫಾತಿಮಾಳನ್ನು ನೋಡಲೆಂದು ತೆರಳಿದ್ದಾಗ ಕೊಠಡಿ ಬಾಗಿಲು ಒಳಗಿನಿಂದ ಚಿಲಕ ಹಾಕಿದ ಸ್ಥಿತಿಯಲ್ಲಿತ್ತು. ಬಳಿಕಕೊಠಡಿ ಬಾಗಿಲನ್ನು ಒಡೆದು ನೋಡಿದಾಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕಳೆದ ವಾರದ ಆಂತರಿಕ ಪರೀಕ್ಷೆಯಲ್ಲಿ ಕಡಿಮೆ ಫಾತಿಮಾ ಅಂಕಗಳನ್ನು ಗಳಿಸಿದ್ದಳು ಎಂದು ಪೊಲೀಸರು ತಿಳಿಸಿದ್ದು, ಆತ್ಮಹತ್ಯೆ ಹಿಂದೆ ಬೇರೆ ಕಾರಣಗಳಿರಬಹುದೇ ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಐಐಟಿ ಮದ್ರಾಸ್ ಹೇಳಿಕೆ ಬಿಡುಗಡೆ ಮಾಡಿದ್ದು, ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯು ನವೆಂಬರ್ 8ರಂದು ನಿಧನ ಹೊಂದಿದ್ದಾಳೆ. ವಿದ್ಯಾರ್ಥಿನಿಯ ಸಾವು ಐಐಟಿ ಮತ್ತು ಕುಟುಂಬಕ್ಕೆ ತುಂಬಲಾರದ ನಷ್ಟ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.