ಠಾಣೆ: ಮಹಾರಾಷ್ಟ್ರದ ಠಾಣೆಯಲ್ಲಿ 13 ವರ್ಷದ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಖರಗಪುರದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ) ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ 23 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಆರೋಪಿಯು ಕಲ್ವಾ ಪ್ರದೇಶದಲ್ಲಿ ವಾಸಿಸುತ್ತಿದ್ದ. ಬಾಲಕಿಗೆ ಹೊಸ ಬಟ್ಟೆ ಕೊಡಿಸುವುದಾಗಿ ಆಮಿಷವೊಡ್ಡಿ, ಅತ್ಯಾಚಾರ ಎಸಗಿದ್ದಾನೆ. ತನಿಖಾ ತಂಡವು ಆರೋಪಿ ಮೊಬೈಲ್ ಫೋನ್ ಪರಿಶೀಲಿಸಿದಾಗ, ಅದರಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋ ಮತ್ತು ಇತರ ಯುವತಿಯರ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೊ ಇರುವುದು ತಿಳಿದುಬಂದಿದೆ’ ಎಂದು ಅವರು ಹೇಳಿದ್ದಾರೆ.
ಆರೋಪಿ, ಈ ಹಿಂದೆ ಅನೇಕ ಯುವತಿಯರ ಮೇಲೆ ದೌರ್ಜನ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.