ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ
ಪಿಟಿಐ ಸಂಗ್ರಹ ಚಿತ್ರ
ಮುಂಬೈ: ಬಾಂಗ್ಲಾದೇಶಿ ಪ್ರಜೆಗಳು ಮತ್ತು ರೋಹಿಂಗ್ಯಾಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ದೇಶದ ಭದ್ರತೆಯ ಪ್ರಮುಖ ಸಮಸ್ಯೆಯಾಗಿದೆ. ಅಲ್ಲದೆ, ಸಮಾಜವನ್ನು ಇಸ್ಲಾಮೀಕರಣಗೊಳಿಸುವ ಪ್ರಯತ್ನವಾಗಿದೆ ಎಂದು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಹೇಳಿದ್ದಾರೆ.
ಅಕ್ರಮ ವಲಸಿಗರನ್ನು ದೇಶದಲ್ಲಿ ಉಳಿಯಲು ಬಿಡಬಾರದು ಎಂದು ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳು ದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಪ್ರಮುಖ ಭದ್ರತಾ ಸಮಸ್ಯೆಯಾಗಿದೆ. ಇದು ನಮ್ಮ ಸಮಾಜವನ್ನು ಇಸ್ಲಾಮೀಕರಣಗೊಳಿಸುವ ಪ್ರಯತ್ನವಾಗಿದೆ. ಇದು ಮುಂಬೈ ಮತ್ತು ದೇಶಕ್ಕೆ ಗಂಭೀರ ಅಪಾಯವಾಗಿದೆ. ಇದು ನಗರ ಅಥವಾ ರಾಜ್ಯದ ಮೇಲೆ ಹಿಡಿತ ಸಾಧಿಸುವ ಪ್ರಯತ್ನವಾಗಿದೆ’ ಎಂದು ರಾಣೆ ತಿಳಿಸಿದ್ದಾರೆ.
ಮಂಗಲ್ ಪ್ರಭಾತ್ ಲೋಧಾ, ಕಿರೀಟ್ ಸೋಮಯ್ಯ ಸೇರಿದಂತೆ ಬಿಜೆಪಿ ನಾಯಕರು ಮುಂಬೈ ಹಿತಾಸಕ್ತಿ ಕಾಪಾಡುವ ಕೆಲಸ ಮಾಡುತ್ತಿದ್ದಾರೆ. ಅಕ್ರಮ ವಲಸಿಗರನ್ನು ದೇಶದಲ್ಲಿ ಉಳಿಯಲು ಬಿಡಬಾರದು. ಅವರನ್ನು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಿಗೆ ಕಳುಹಿಸಬೇಕು. ಒಬ್ಬನೇ ಒಬ್ಬ ಬಾಂಗ್ಲಾದೇಶಿ ಅಥವಾ ರೋಹಿಂಗ್ಯಾ ಇಲ್ಲಿ ಉಳಿಯಬಾರದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.