ಲಖನೌ: ಅಕ್ರಮ ಮತಾಂತರ ದಂಧೆಯ ಸೂತ್ರಧಾರ ಚಂಗೂರ್ ಬಾಬಾನ ಸಹಾಯಕ ನವೀನ್ ರೋಹ್ರಾ ಎಂಬಾತನನ್ನು ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ‘ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ’ಯಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯವು ಸೋಮವಾರ ಆದೇಶಿಸಿದೆ.
ಅಕ್ರಮ ಮತಾಂತರ ಜಾಲಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವೀನ್‌ನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆಯ ಪೊಲೀಸರು ಇತ್ತೀಚೆಗೆ ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ನವೀನ್‌ನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಇ.ಡಿ ಸ್ಥಳೀಯ ನ್ಯಾಯಾಲಯಕ್ಕೆ ಮನವಿ ಮಾಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.