ADVERTISEMENT

ಇಂಡೊನೇಷ್ಯಾದ ಅಕ್ರಮ ಗಣಿಯಲ್ಲಿ ಕುಸಿತ: 3 ಸಾವು, ಐವರು ನಾಪತ್ತೆ

ಏಜೆನ್ಸೀಸ್
Published 25 ಫೆಬ್ರುವರಿ 2021, 7:42 IST
Last Updated 25 ಫೆಬ್ರುವರಿ 2021, 7:42 IST
ಇಂಡೊನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಚಿನ್ನದ ಅಕ್ರಮ ಗಣಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದು     –ಎಎಫ್‌ಪಿ ಚಿತ್ರ
ಇಂಡೊನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಚಿನ್ನದ ಅಕ್ರಮ ಗಣಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದು     –ಎಎಫ್‌ಪಿ ಚಿತ್ರ   

ಜಕಾರ್ತ: ‘ಇಂಡೊನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಚಿನ್ನದ ಅಕ್ರಮ ಗಣಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಮೂವರು ಮೃತ‍ಪಟ್ಟಿದ್ಧಾರೆ. ಐದು ಮಂದಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.

‘ಕೇಂದ್ರ ಸುಲಾವೆಸಿ ಪ್ರಾಂತ್ಯದ ಪರಿಗಿ ಮೌಟೊಂಗ್‌ ಜಿಲ್ಲೆಯಲ್ಲಿರುವ ಚಿನ್ನದ ಗಣಿಯಲ್ಲಿ ಬುಧವಾರ ತಡರಾತ್ರಿ ಭೂ ಕುಸಿತ ಸಂಭವಿಸಿದೆ. ಮಣ್ಣಿನಡಿಯಲ್ಲಿ 23 ಮಂದಿ ಸಿಲುಕಿದ್ದರು. ಈ ಪೈಕಿ ಮೂವರು ಮಹಿಳೆಯರು ಮೃತಪಟ್ಟಿದ್ದು, 15 ಮಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ’ ಎಂದು ಸ್ಥಳೀಯ ರಕ್ಷಣಾ ಏಜೆನ್ಸಿಯ ಮುಖ್ಯಸ್ಥರು ಮಾಹಿತಿ ನೀಡಿದರು.

ಪೊಲೀಸರು, ತುರ್ತುಪರಿಸ್ಥಿತಿ ಸಿಬ್ಬಂದಿ, ಸೈನಿಕರು ಸೇರಿದಂತೆ ಸ್ವಯಂಸೇವಕರು ಶೋಧ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.