ಬಂಧನ
(ಪ್ರಾತಿನಿಧಿಕ ಚಿತ್ರ)
ನವದೆಹಲಿ: ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಮೂವರು ಮಕ್ಕಳು ಸೇರಿದಂತೆ 30 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಿಕ್ಷಾಟನೆ ಸೇರಿದಂತೆ ಅನುಮಾನಾಸ್ಪದ ಚಟುವಟಿಕೆಗಳಲ್ಲಿ ತೊಡಗಿರುವ ಅಕ್ರಮ ವಲಸಿಗರ ಬಗ್ಗೆ ಖಚಿತ ಮಾಹಿತಿ ಆಧರಿಸಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ತಿಂಗಳಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ದೆಹಲಿಯ ವಿವಿಧ ಪ್ರದೇಶಗಳಲ್ಲಿ ವಾಸವಿದ್ದ 30 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ವಿಚಾರಣೆಯ ಸಮಯದಲ್ಲಿ, 12 ಮಹಿಳೆಯರು, 15 ಪುರುಷರು ಮತ್ತು ಮೂವರು ಮಕ್ಕಳು ಸೇರಿದಂತೆ ಆರೋಪಿಗಳು ಸೂಕ್ತ ದಾಖಲೆಗಳಿಲ್ಲದೆ ಭಾರತಕ್ಕೆ ನುಸುಳಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಬಂಧಿತರಿಂದ ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬಂಧಿತರಲ್ಲಿ ಹಲವರು ಕೆಲವು ವರ್ಷಗಳಿಂದ ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಆರೋಪಿಗಳನ್ನು ವಿದೇಶಿ ಪ್ರಜೆಗಳ ಕಾಯ್ದೆ ಮತ್ತು ಭಾರತೀಯ ಪಾಸ್‌ಪೋರ್ಟ್ ಕಾಯ್ದೆಯಡಿಯಲ್ಲಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.