
ಅಮಿತ್ ಶಾ
(ಪಿಟಿಐ ಚಿತ್ರ)
ಬೆತಿಯಾ: 'ಬಾಂಗ್ಲಾದೇಶದ ಅಕ್ರಮ ವಲಸಿಗರು ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದ್ದು, ದೇಶದ ಭದ್ರತೆಗೆ ಬೆದರಿಕೆ ಒಡ್ಡುತ್ತಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಗುರುವಾರ) ಹೇಳಿದ್ದಾರೆ.
ಆದರೆ ಬಿಹಾರ ವಿಧಾನಸಭಾ ಚುನಾವಣೆಯು ಪೂರ್ವ ರಾಜ್ಯವನ್ನು ನುಸುಳುಕೋರರಿಂದ ಮುಕ್ತಗೊಳಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಪಶ್ಚಿಮ ಚಂಪಾರಣ್ ಮತ್ತು ಮೋತಿಹಾರಿ ಜಿಲ್ಲೆಗಳಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 'ಆರ್‌ಜೆಡಿ ಅಧಿಕಾರದಲ್ಲಿದ್ದಾಗ ಹತ್ಯೆ, ಅತ್ಯಾಚಾರ ಪ್ರಕರಣಗಳು ಸಾಮಾನ್ಯವಾಗಿತ್ತು. ಆದರೆ ಎನ್‌ಡಿಎ ಸರ್ಕಾರದಲ್ಲಿ ಅವುಗಳಿಗೆ ಯಾವುದೇ ಸ್ಥಾನವಿಲ್ಲ' ಎಂದಿದ್ದಾರೆ.
'ಬಿಹಾರದಲ್ಲಿ 'ಜಂಗಲ್ ರಾಜ್' ತಡೆಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಂದ ಮಾತ್ರ ಸಾಧ್ಯ. ಮತ್ತೊಂದೆಡೆ ಲಾಲೂ ಪ್ರಸಾದ್ ಹಾಗೂ ರಾಹುಲ್ ಗಾಂಧಿ ನುಸುಳುಕೋರರಿಗೆ ದಾರಿ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.
'ಬಿಹಾರವು ಇಂದಿರಾ ಗಾಂಧಿ ಅವರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿತು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿತು. ಆದರೆ ಈಗ ಆರ್‌ಜೆಡಿಯ ಸಹಾಯದಿಂದ ಕಾಂಗ್ರೆಸ್ ರಾಜ್ಯವನ್ನು ಆಳಲು ಯತ್ನಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.