ADVERTISEMENT

ದೇಶದ ಚುನಾವಣೆಯಲ್ಲಿ ಅಕ್ರಮ ವಲಸಿಗರ ಹಸ್ತಕ್ಷೇಪ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌

ಪಿಟಿಐ
Published 22 ಫೆಬ್ರುವರಿ 2025, 15:42 IST
Last Updated 22 ಫೆಬ್ರುವರಿ 2025, 15:42 IST
<div class="paragraphs"><p>ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಮರಾಠವಾಡ ವಿಶ್ವವಿದ್ಯಾಲಯದ 65ನೇ ಘಟಿಕೋತ್ಸವದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಶಿವಾಜಿ ಮಹಾರಾಜ್‌ ಮತ್ತು ಅಂಬೇಡ್ಕರ್‌ ಅವರ ಭಾವಚಿತ್ರಗಳಿಗೆ ಶನಿವಾರ ಪುಷ್ಪ ನಮನ ಸಲ್ಲಿಸಿದರು </p></div>

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಮರಾಠವಾಡ ವಿಶ್ವವಿದ್ಯಾಲಯದ 65ನೇ ಘಟಿಕೋತ್ಸವದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಶಿವಾಜಿ ಮಹಾರಾಜ್‌ ಮತ್ತು ಅಂಬೇಡ್ಕರ್‌ ಅವರ ಭಾವಚಿತ್ರಗಳಿಗೆ ಶನಿವಾರ ಪುಷ್ಪ ನಮನ ಸಲ್ಲಿಸಿದರು

   

– ಪಿಟಿಐ ಚಿತ್ರ

ಛತ್ರಪತಿ ಸಂಭಾಜಿನಗರ (ಮಹಾರಾಷ್ಟ್ರ): ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ವಲಸಿಗರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಶನಿವಾರ ಹೇಳಿದ್ದಾರೆ. 

ADVERTISEMENT

ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಮರಾಠವಾಡ ವಿಶ್ವವಿದ್ಯಾಲಯದ 65ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.

‘ಭಾರತದಲ್ಲಿ ನೆಲಸುವ ಹಕ್ಕಿಲ್ಲದೆಯೂ ಕೋಟ್ಯಂತರ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಅವರು ಇಲ್ಲಿ ತಮ್ಮ ಜೀವನೋಪಾಯ ನಡೆಸುತ್ತಿದ್ದಾರೆ. ಅವರು ನಮ್ಮ ಸಂಪನ್ಮೂಲಗಳ ಮೇಲೆ ಬೇಡಿಕೆಗಳನ್ನು ಇಡುತ್ತಿದ್ದಾರೆ. ನಮ್ಮ ಶಿಕ್ಷಣ, ಆರೋಗ್ಯ ಕ್ಷೇತ್ರ, ವಸತಿ ಕ್ಷೇತ್ರದ ಮೇಲೂ ಬೇಡಿಕೆಗಳನ್ನು ಇಡುತ್ತಿದ್ದಾರೆ. ಈಗ ಇನ್ನಷ್ಟು ಮುಂದೆ ಹೋಗಿ, ಅವರು ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುತ್ತಿದ್ದಾರೆ. ಪ್ರತಿಯೊಬ್ಬ ಭಾರತೀಯನು ಎಚ್ಚರಗೊಳ್ಳಬೇಕಿದೆ. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ’ ಎಂದು ಧನಕರ್‌ ಹೇಳಿದರು.

ಅಮೆರಿಕ ಸರ್ಕಾರವು ಅಕ್ರಮ ವಲಸಿಗರನ್ನು ಗಡೀಪಾರು ಮಾಡುತ್ತಿರುವುದನ್ನು ಉಲ್ಲೇಖಿಸಿದ ಅವರು, ‘ನಮ್ಮ ದೇಶದಲ್ಲಿ ಈ ಪ್ರಕ್ರಿಯೆಯು ಯಾವಾಗ ಪ್ರಾರಂಭವಾಗಲಿದೆಯೆಂದು ಪ್ರತಿ ಭಾರತೀಯನೂ ಕೇಳಬೇಕು‘ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.