ಬಂಧನ
(ಪ್ರಾತಿನಿಧಿಕ ಚಿತ್ರ)
ಮುಂಬೈ: ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಬಾಂಗ್ಲಾದೇಶಿ ಪ್ರಜೆಗಳನ್ನು ಮುಂಬೈನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸುಳಿವು ಮತ್ತು ದೂರಿನ ಆಧಾರದ ಮೇಲೆ ಪೊಲೀಸರು ಪನ್ವೇಲ್‌ನ ಕರಂಜಾಡೆ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತರು ಹಲವು ವರ್ಷಗಳಿಂದ ಅಕ್ರಮವಾಗಿ ಭಾರತದಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ಆಕಾಶ್ ಗಾಜಿ (35) ಅಲೋ ಖಾತುನ್ ಇಸ್ಮಾಯಿಲ್ ಗಾಜಿ (31), ಇಸ್ಟ್ರಾಫಿಲ್ ಇಸ್ಲಾಂ ಗಾಜಿ (25), ಕಿಯಾ ಆಕಾಶ್ ಗಾಜಿ (21) ಮತ್ತು ಆಕಾಶ್ ಲತೀಫ್ ಗಾಜಿ (40) ಗುರುತಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಮೇ 9ರವರೆಗೆ ಬಂಧಿತರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳನ್ನು ವಿದೇಶಿ ಪ್ರಜೆಗಳ ಕಾಯ್ದೆ ಮತ್ತು ಭಾರತೀಯ ಪಾಸ್‌ಪೋರ್ಟ್ ಕಾಯ್ದೆಯಡಿಯಲ್ಲಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.