ADVERTISEMENT

ಹಣ ಅಕ್ರಮ ವರ್ಗಾವಣೆ: ಜಾರ್ಖಂಡ್‌ ಸಿ.ಎಂ ಹೇಮಂತ್ ಸೊರೆನ್‌ಗೆ ಇ.ಡಿ ಸಮನ್ಸ್

ಪಿಟಿಐ
Published 2 ನವೆಂಬರ್ 2022, 11:43 IST
Last Updated 2 ನವೆಂಬರ್ 2022, 11:43 IST
ಹೇಮಂತ್ ಸೊರೇನ್‌
ಹೇಮಂತ್ ಸೊರೇನ್‌   

ನವದೆಹಲಿ:ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ.3ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಜಧಾನಿ ರಾಂಚಿಯಲ್ಲಿರುವ ತನ್ನ ಪ್ರಾದೇಶಿಕ ಕಚೇರಿಯಲ್ಲಿ ತನಿಖೆಗೆ ಹಾಜರಾಗುವಂತೆಸೊರೆನ್‌ಗೆ ಹೇಳಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಸಂಸ್ಥೆಯು ಮುಖ್ಯಮಂತ್ರಿ ಹೇಳಿಕೆ ದಾಖಲಿಸಿಕೊಳ್ಳಲಿದೆ.ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಈ ಹಿಂದೆ ಅವರ ರಾಜಕೀಯ ಸಹಾಯಕ ಪಂಕಜ್ ಮಿಶ್ರಾ ಮತ್ತು ಇತರೆ ಇಬ್ಬರು ಸ್ಥಳೀಯರಾದ ಬಚು ಯಾದವ್ ಮತ್ತು ಪ್ರೇಮ್ ಪ್ರಕಾಶ್ ಅವರನ್ನು ಬಂಧಿಸಿತ್ತು.

ADVERTISEMENT

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅಪರಾಧದ ಆದಾಯ ಇಲ್ಲಿಯವರೆಗೆ ₹ 1,000 ಕೋಟಿಗೂ ಹೆಚ್ಚು ಎಂದು ಗುರುತಿಸಲಾಗಿದೆ ಎಂದು ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.