ಪ್ರಾತಿನಿಧಿಕ ಚಿತ್ರ
ಲಖನೌ(ಉತ್ತರ ಪ್ರದೇಶ): ಮದರಸಾಗಳು, ಮಸೀದಿಗಳು ಮತ್ತು ಈದ್ಗಾಗಳು ಸೇರಿದಂತೆ ರಾಜ್ಯದಲ್ಲಿ ಇತ್ತೀಚೆಗೆ 350ಕ್ಕೂ ಹೆಚ್ಚು ಅನಧಿಕೃತ ಧಾರ್ಮಿಕ ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಕೆಲವನ್ನು ಸೀಲ್ ಮಾಡಲಾಗಿದ್ದು, ಇನ್ನೂ ಕೆಲವು ಕಟ್ಟಡಗಳನ್ನು ಕೆಡವಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಭಾನುವಾರ ತಿಳಿಸಿದೆ.
ಯಾವುದೇ ಧಾರ್ಮಿಕ ಅತಿಕ್ರಮಣವನ್ನು ಸಹಿಸುವುದಿಲ್ಲ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸ್ಪಷ್ಟ ನಿರ್ದೇಶನದ ಮೇರೆಗೆ, ಪಿಲಿಭಿತ್, ಶ್ರಾವಸ್ತಿ, ಬಲರಾಂಪುರ, ಬಹ್ರೈಚ್, ಸಿದ್ಧಾರ್ಥನಗರ ಮತ್ತು ಮಹಾರಾಜ್‌ಗಂಜ್ ಜಿಲ್ಲೆಗಳಲ್ಲಿ ಆಡಳಿತವು ವ್ಯಾಪಕ ಕಾರ್ಯಾಚರಣೆ ಪ್ರಾರಂಭಿಸಿದೆ.
ಅಧಿಕಾರಿಗಳು ಅಕ್ರಮ ಧಾರ್ಮಿಕ ಕಟ್ಟಡಗಳನ್ನು ಗುರುತಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಭಾನುವಾರವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವುದೇ ಧರ್ಮದ ಹೆಸರಿನಲ್ಲಿ ಅತಿಕ್ರಮಣಕ್ಕೆ ಅವಕಾಶ ನೀಡಲಾಗುವುದಿಲ್ಲ. ನಿಯಮ ಉಲ್ಲಂಘಿಸುವವರು, ವಿಶೇಷವಾಗಿ ಮಾನ್ಯತೆ ಪಡೆಯದೆ ಧಾರ್ಮಿಕ ಸಂಸ್ಥೆಗಳನ್ನು ನಡೆಸುವವರು ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.