ADVERTISEMENT

ಬಿಹಾರ: ಮತದಾರ ಪಟ್ಟಿಯಲ್ಲಿ ಅಕ್ರಮ ವಲಸಿಗರ ಹೆಸರು!

ಪಿಟಿಐ
Published 13 ಜುಲೈ 2025, 6:52 IST
Last Updated 13 ಜುಲೈ 2025, 6:52 IST
<div class="paragraphs"><p>ಚುನಾವಣಾ ಆಯೋಗ</p></div>

ಚುನಾವಣಾ ಆಯೋಗ

   

ಪಿಟಿಐ ಚಿತ್ರ

ನವದೆಹಲಿ:  ಮತಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಅಕ್ರಮ ವಲಸಿಗರ ಕುರಿತು ಆಗಸ್ಟ್‌ 1ರ ಬಳಿಕ ತನಿಖೆ ನಡೆಸಲಾಗುವುದು. ತನಿಖೆಯ ಬಳಿಕ ಮತಪಟ್ಟಿಯಿಂದ ಅವರ ಹೆಸರುಗಳನ್ನು ತೆಗದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್‌ 30ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆಯಾಗಲಿದ್ದು, ಅದರಲ್ಲಿ ಅಕ್ರಮ ವಲಸಿಗರ ಹೆಸರು ಇರುವುದಿಲ್ಲ ಎಂದೂ ತಿಳಿದುಬಂದಿದೆ.

ADVERTISEMENT

ಮತಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಅಕ್ರಮ ವಲಸಿಗರ ಕುರಿತು ಆಗಸ್ಟ್‌ 1ರ ಬಳಿಕ ತನಿಖೆ ನಡೆಸಲಾಗುವುದು. ತನಿಖೆಯ ಬಳಿಕ ಮತಪಟ್ಟಿಯಿಂದ ಅವರ ಹೆಸರುಗಳನ್ನು ತೆಗದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್‌ 30ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆಯಾಗಲಿದ್ದು, ಅದರಲ್ಲಿ ಅಕ್ರಮ ವಲಸಿಗರ ಹೆಸರು ಇರುವುದಿಲ್ಲ ಎಂದೂ ತಿಳಿದುಬಂದಿದೆ.

ಪ್ರಸಕ್ತ ವರ್ಷದ ಜೂನ್‌ 24ರ ವರೆಗೆ ಮತದಾರ ಪಟ್ಟಿಗೆ ನೋಂದಾಯಿಸಿಕೊಂಡಿರುವವರಿಗೆ ನೀಡಲಾಗಿದ್ದ ಗಣತಿ ಅರ್ಜಿಯನ್ನು ವಾಪಸ್ ಪಡೆಯುವುದಕ್ಕಾಗಿ ಬೂತ್‌ ಮಟ್ಟದ ಅಧಿಕಾರಿಗಳು ಮನೆ–ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಂಗ್ಲಾ, ಮ್ಯಾನ್ಮಾರ್‌ ಮತ್ತು ನೇಪಾಳದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಪತ್ತೆಯಾಗಿದೆ ಎಂದು ಆಯೋಗದ ಮೂಲಗಳು ಹೇಳಿವೆ.

ಅಲ್ಲದೇ, ದೇಶದಾದ್ಯಂತ ಹಂತಹಂತವಾಗಿ ಆಯೋಗ ಈ ಮತದಾರರ ಪಟ್ಟಿ ಪರಿಶೀಲನೆ ನಡೆಸಲಿದೆ ಎಂದೂ ತಿಳಿದುಬಂದಿದೆ.

ಆಗಸ್ಟ್ 1ರಿಂದ ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಕುರಿತು ವಿಚಾರಣೆ ನಡೆಸಲಾಗುತ್ತದೆ. ಸೆಪ್ಟೆಂಬರ್ 30ರಂದು ಪ್ರಕಟವಾಗುವ ಅಂತಿಮ ಮತದಾರರ ಪಟ್ಟಿಯಿಂದ ಅಕ್ರಮ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತದೆ. ಆದರೆ, ಈಗಿನ ಮತದಾರರ ಪಟ್ಟಿಯಲ್ಲಿ ಪತ್ತೆಯಾದ ನೇಪಾಳ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ ಪ್ರಜೆಗಳ ಹೆಸರುಗಳ ಕುರಿತಾದ ಯಾವುದೇ ಅಂಕಿಅಂಶಗಳನ್ನು ಚುನಾವಣಾ ಆಯೋಗದ ಮೂಲಗಳು ಒದಗಿಸಿಲ್ಲ.

ರಾಜ್ಯದ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವುದಕ್ಕೆ ಪರಿಗಣಿಸಲಾಗುವ 11 ದಾಖಲೆಗಳ ಪಟ್ಟಿಯನ್ನು ಚುನಾವಣಾ ಆಯೋಗ ಜೂನ್‌ 24ರಂದು ಪ್ರಕಟಿಸಿತ್ತು. ಈ ಪಟ್ಟಿಯು ಆಧಾರ್‌ ಕಾರ್ಡ್‌, ಎಪಿಕ್ ಮತ್ತು ಪಡಿತರಚೀಟಿ ಒಳಗೊಂಡಿರಲಿಲ್ಲ. ಹೀಗಾಗಿ, ಆಧಾರ್‌, ಎಪಿಕ್‌ ಹಾಗೂ ಪಡಿತರ ಚೀಟಿಗಳನ್ನು ಪರಿಗಣಿಸದೇ ಇರುವುದಕ್ಕೆ ಸೂಕ್ತ ಕಾರಣಗಳನ್ನು ನೀಡುವಂತೆ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಈಚೆಗೆ ಸೂಚಿಸಿತ್ತು.

ಇದರ ಬೆನ್ನಲ್ಲೇ ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಮಾಹಿತಿ ಸಂಗ್ರಹಿಸಲು ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಬಿಹಾರದಲ್ಲಿ ಸುಮಾರು 8 ಕೋಟಿ ಮತದಾರರಿದ್ದು, ಜುಲೈ 25ರವರೆಗೆ ತಮ್ಮ ಪೌರತ್ವ ಮತ್ತು ಜನ್ಮ ದಿನಾಂಕವನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ವೇಳೆ ಜುಲೈ 25ರೊಳಗೆ ದಾಖಲೆಗಳನ್ನು ಒದಗಿಸಲು ಸಾಧ್ಯವಾಗದಿದ್ದರೆ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 30ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಪಕ್ಷಗಳ ಆಕ್ಷೇಪ:
ಎಸ್ಐಆರ್‌ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತ ಪಡಿಸಿವೆ.ಚುನಾವಣಾ ಆಯೋಗ ನಡೆಸುತ್ತಿರುವ ಪರಿಶೀಲನೆಯಿಂದ ಬಡವರು ಮತ್ತು ವಲಸೆ ಕಾರ್ಮಿಕರ ಹಕ್ಕು ಕಸಿದಂತಾಗುತ್ತದೆ. ಯಾವುದೇ ವ್ಯಕ್ತಿಯ ಪೌರತ್ವವನ್ನು ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಕಾನೂನು ಬದ್ಧವಾದ ಅಧಿಕಾರವಿಲ್ಲ. ಅಲ್ಲದೇ, ಸ್ಥಳೀಯ ಅಧಿಕಾರಿಗಳಿಗೆ ಅನಗತ್ಯವಾಗಿ ಹೆಚ್ಚುವರಿ ಅಧಿಕಾರ ನೀಡಲಾಗಿದ್ದು, ಅದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಗಳಿದೆ ಎಂದು ಆರೋಪಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.