ADVERTISEMENT

ಉತ್ತರ ಪ್ರದೇಶ: 4 ವರ್ಷಗಳಲ್ಲಿ ಕಳ್ಳಭಟ್ಟಿ ದುರಂತದಲ್ಲಿ 400 ಸಾವು – ಕಾಂಗ್ರೆಸ್

ಪಿಟಿಐ
Published 5 ಏಪ್ರಿಲ್ 2021, 3:36 IST
Last Updated 5 ಏಪ್ರಿಲ್ 2021, 3:36 IST
ಸಾಂದರ್ಭಿಕ ಚಿತ್ರ – ಕೃಪೆ: ಐಸ್ಟಾಕ್
ಸಾಂದರ್ಭಿಕ ಚಿತ್ರ – ಕೃಪೆ: ಐಸ್ಟಾಕ್   

ಲಖನೌ: ಉತ್ತರ ಪ್ರದೇಶದಲ್ಲಿ ಸರ್ಕಾರ ಮತ್ತು ಮದ್ಯ ಮಾಫಿಯಾ ನಡುವೆ ಸಂಬಂಧವಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಕಳ್ಳಭಟ್ಟಿ ಸೇವಿಸಿ ಸುಮಾರು 400 ಮಂದಿ ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

‘ರಾಜ್ಯದಲ್ಲಿ ಸರ್ಕಾರ ಮತ್ತು ಮದ್ಯ ಮಾಫಿಯಾ ನಡುವೆ ಬಾಂಧವ್ಯವಿದೆ. ಕಳೆದ ನಾಲ್ಕು ವರ್ಷಗಳಲ್ಲಿ, ಕಳ್ಳಭಟ್ಟಿಯು ಸುಮಾರು 400 ಜನರನ್ನು ಬಲಿ ತೆಗೆದುಕೊಂಡಿದೆ. ಅಕ್ರಮ ಮತ್ತು ನಕಲಿ ಮದ್ಯ ತಯಾರಿಯು ಉತ್ತರ ಪ್ರದೇಶದಲ್ಲಿ ಆತಂಕ ಹುಟ್ಟಿಸುವ ಪ್ರಮಾಣದಲ್ಲಿದೆ’ ಎಂದು ಕಾಂಗ್ರೆಸ್‌ನ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ.

ಮದ್ಯ ಮಾಫಿಯಾವನ್ನು ಸರ್ಕಾರವು ರಕ್ಷಿಸುತ್ತಿದೆ. ನೂರಾರು ಸಾವುಗಳ ಸಂಭವಿಸಿದ ಹೊರತಾಗಿಯೂ ಜವಾಬ್ದಾರಿಯುತ ಹುದ್ದೆಗಳಲ್ಲಿರುವ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.