ಉತ್ಸವದಲ್ಲಿ ಹಮಾಸ್ ನಾಯಕರ ಭಾವಚಿತ್ರ ಪ್ರದರ್ಶನ
ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ವಾರ್ಷಿಕ ಸಾಂಸ್ಕೃತಿಕ ಉತ್ಸವದ ಮೆರವಣಿಗೆಯಲ್ಲಿ ಹಮಾಸ್ ನಾಯಕರ ಭಾವಚಿತ್ರ ಪ್ರದರ್ಶಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ.
ತ್ರಿಥಲಾ ಉತ್ಸವದ ಮೆರವಣಿಗೆ ವೇಳೆ ಯುವಕರು ಆನೆಯ ಮೇಲೆ ಹಮಾಸ್ ನಾಯಕರ ಭಾವಚಿತ್ರವಿರುವ ಬ್ಯಾನರ್ ಪ್ರದರ್ಶನ ಮಾಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟುಹಾಕಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ರೀತಿಯ ಬ್ಯಾನರ್ ಪ್ರದರ್ಶಿಸುವುದು ಎಷ್ಟು ಸರಿ ಎಂದು ಆಯೋಜಕರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ವಿ.ಟಿ ಬಲರಾಮ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಚರ್ಚೆಯನ್ನು ಮತ್ತಷ್ಟು ಹೆಚ್ಚಿಸಿದೆ. ಭಾವಚಿತ್ರ ಪ್ರದರ್ಶನದ ವಿಚಾರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸಮರ್ಥನೆ ನೀಡಿದ ಬಲರಾಮ್, ದೇಶದಲ್ಲಿ ಸಂಘ ಪರಿವಾರಕ್ಕೆ ಸೇರದೇ ಇರುವವರೆಲ್ಲರೂ ಪ್ಯಾಲೆಸ್ಟೀನಿಯರಿಗೆ ಬೆಂಬಲ ನೀಡುತ್ತಾರೆ. ಅಲ್ಲದೆ ಅವರ ಸ್ವಾತಂತ್ರ್ಯವನ್ನು ಬಯಸುತ್ತಾರೆ. ಈ ವಿಚಾರವನ್ನು ಮುಸ್ಲಿಂ ಸಮುದಾಯ ಮತ್ತು ಕೇರಳವನ್ನು ರಾಷ್ಟ್ರಮಟ್ಟದಲ್ಲಿ ಗುರಿಯಾಗಿಸಲು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.