ADVERTISEMENT

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೇರಳದಲ್ಲಿ ಜಲಾಶಯಗಳು ಭರ್ತಿ

ಒಡಿಶಾದಲ್ಲಿ ಮನೆ ಕುಸಿದು 6 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 21:03 IST
Last Updated 9 ಆಗಸ್ಟ್ 2022, 21:03 IST
   

ಮುಂಬೈ/ಇಡುಕ್ಕಿ/ಭುವನೇಶ್ವರ: ಮಹಾರಾಷ್ಟ್ರ, ಕೇರಳ ಮತ್ತು ಒಡಿಶಾದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಹಾರಾಷ್ಟ್ರ, ಒಡಿಶಾದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್‌ ಘೋಷಿಸಿದೆ. ಕೇರಳದಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಇಡುಕ್ಕಿ, ಮಲಪ್ಪುರ ಸೇರಿದಂತೆ ಹಲವು ಅಣೆಕಟ್ಟೆಗಳಿಂದ ನೀರನ್ನು ಹೊರಬಿಡಲಾಗಿದೆ.

ಮಹಾರಾಷ್ಟ್ರದ ಉತ್ತರ ಕೊಂಕಣ ಮತ್ತು ಉತ್ತರ ಕೇಂದ್ರ, ಪೂರ್ವ ಮತ್ತು ಪಶ್ಚಿಮ ವಿದರ್ಭ ಪ್ರದೇಶಗಳಲ್ಲಿ ಇದೇ 12ರ ವರೆಗೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.