ಸಾಂದರ್ಭಿಕ ಚಿತ್ರ
ತಿರುವನಂತಪುರಂ: ಕೇರಳದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು (ಶನಿವಾರ) ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ ) ಮುನ್ಸೂಚನೆ ನೀಡಿದೆ.
ಐಎಂಡಿ ಪ್ರಕಾರ, ತಿರುವನಂತಪುರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಹಾಗೂ 40 ಕಿ. ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದೇ ಕೊಲ್ಲಂ, ಪತ್ತನಂತಿಟ್ಟ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.