ADVERTISEMENT

ಮುಂದಿನ 4 ದಿನ ರಾಜ್ಯ ಸೇರಿ ಚೆನ್ನೈನಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಐಎಎನ್ಎಸ್
Published 19 ಜೂನ್ 2022, 6:25 IST
Last Updated 19 ಜೂನ್ 2022, 6:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ಮುಂದಿನ 48 ಗಂಟೆಗಳ ಕಾಲ ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಒಡಿಶಾಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಮತ್ತು 26 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನೈರುತ್ಯ ಮುಂಗಾರು ಮಾರುತಗಳು ಕರಾವಳಿಗೆ ಅಪ್ಪಳಿಸಿವೆ. ಜತೆಗೆ. ಗಾಳಿ ವೇಗವಾಗಿ ಬೀಸುತ್ತಿರುವ ಕಾರಣದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ADVERTISEMENT

ಮಂಗಳವಾರದ ವೇಳೆಗೆ ಹವಾಮಾನದಲ್ಲಿ ಬದಲಾವಣೆಯಾಗಲಿದೆ. ಆದರೆ, ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದುತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.