ಮಳೆ
ಬೆಂಗಳೂರು: ಕರ್ನಾಟಕವನ್ನೂ ಒಳಗೊಂಡು ದಕ್ಷಿಣ ಭಾರತದಲ್ಲಿ ಅ. 18ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕೆಲ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.
ಈ ಅವಧಿಯಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಎಚ್ಚರಿಸಿದೆ.
ನೈರುತ್ಯ ಮುಂಗಾರು ಕೊನೆಗೊಳ್ಳುವ ಮನ್ಸೂಚನೆಯೂ ಇದೆ. ಹೀಗಾಗಿ ಕೇಂದ್ರ ಮತ್ತು ಪೂರ್ವ ಭಾರತದ ಹಲವೆಡೆ ಮಳೆಯಾಗಲಿದೆ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.