ADVERTISEMENT

ಅಪಘಾತ ಸಂತ್ರಸ್ತರಿಗೆ ಪರಿಹಾರ: ಕಾನೂನು ಜಾರಿಗೊಳಿಸಿ -ದೆಹಲಿ ಹೈಕೋರ್ಟ್‌ ನಿರ್ದೇಶನ

ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‌ ನಿರ್ದೇಶನ

ಪಿಟಿಐ
Published 22 ಜನವರಿ 2023, 14:27 IST
Last Updated 22 ಜನವರಿ 2023, 14:27 IST
ದೆಹಲಿ ಹೈಕೋರ್ಟ್‌ 
ದೆಹಲಿ ಹೈಕೋರ್ಟ್‌    

ನವದೆಹಲಿ: ವಿಮೆ ಇಲ್ಲದ ವಾಹನಗಳಿಂದ ಉಂಟಾಗುವ ರಸ್ತೆ ಅಪಘಾತಗಳು ಹಾಗೂ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ಒದಗಿಸುವುದಕ್ಕಾಗಿ ಅಗತ್ಯ ಕಾನೂನು ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್‌, ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಮ್‌ ಪ್ರಸಾದ್‌ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಕುಟುಂಬದವರು ಸಲ್ಲಿಸಿದ್ದ ಅರ್ಜಿಯೊಂದನ್ನು ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿದೆ.

‘ವಿಮೆ ಮಾಡಿಸದ ವಾಹನಗಳಿಂದ ಉಂಟಾಗುವ ರಸ್ತೆ ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವುದಕ್ಕಾಗಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಸಂಬಂಧ ಮಾರ್ಗಸೂಚಿಗಳನ್ನು ರೂಪಿಸಬೇಕಿದೆ’ ಎಂದು ಕೇಂದ್ರ ಸರ್ಕಾರವು ನ್ಯಾಯಪೀಠಕ್ಕೆ ತಿಳಿಸಿದೆ.

ADVERTISEMENT

‘ಅ‍ಪಘಾತ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವುದಕ್ಕಾಗಿ ಈಗಾಗಲೇ ಯೋಜನೆಯೊಂದು ಅಸ್ತಿತ್ವದಲ್ಲಿದೆ. ಅದರಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಬೇಕಿದ್ದು, ಅದಕ್ಕಾಗಿ 6 ತಿಂಗಳು ಕಾಲಾವಕಾಶ ನೀಡಬೇಕು’ ಎಂದೂ ಕೇಂದ್ರ ಸರ್ಕಾರ ಮನವಿ ಮಾಡಿದ್ದು, ಇದನ್ನು ನ್ಯಾಯಪೀಠವು ಮಾನ್ಯ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.