ಕಣ್ಣೂರು(ಕೇರಳ): ಅಮೆರಿಕವು ಆಮದು ಸುಂಕವನ್ನು ಹೆಚ್ಚಿಸಿರುವುದರಿಂದ ರಾಜ್ಯದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಉಂಟಾಗಲಿದೆ, ಸರ್ಕಾರ ಈ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಹೇಳಿದರು.
ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಸುಂಕ ಹೆಚ್ಚಳವು ಭಾರತದ ಆರ್ಥಿಕತೆಗೆ ದೊಡ್ಡ ಹೊಡೆತವಾಗಿದ್ದು, ಅದರಲ್ಲೂ ಕೇರಳ ತೀವ್ರ ಪರಿಣಾಮ ಬೀರಬಹುದು’ ಎಂದರು.
‘ಕೇರಳದ ಕೃಷಿ ಉತ್ಪನ್ನಗಳನ್ನು ಅತಿ ಹೆಚ್ಚು ಆಮದು ಮಾಡಿಕೊಳ್ಳುವ ಎರಡನೇ ರಾಷ್ಟ್ರ ಅಮೆರಿಕ. ರಾಜ್ಯದಲ್ಲಿನ ಗೋಡಂಬಿ, ಅಕ್ಕಿ, ತರಕಾರಿ, ಸಂಸ್ಕರಿಸಿದ ಹಣ್ಣುಗಳು ಶೇ 20ರಷ್ಟು ಅಮೆರಿಕಕ್ಕೆ ರಫ್ತಾಗುತ್ತವೆ. ದೇಶದಲ್ಲಿ ಅತಿ ಹೆಚ್ಚು ಮೀನುಗಾರಿಕಾ ಸಂಸ್ಕರಣಾ ಘಟಕಗಳನ್ನು ಹೊಂದಿರುವ ರಾಜ್ಯ ಕೇರಳ. ಹೆಚ್ಚುವರಿ ಸುಂಕವು ಮೀನುಗಾರಿಕೆ ರಫ್ತಿನ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂದು ಹೇಳಿದರು.
ಭಾರತದಿಂದ ಆಮದು ಆಗುವ ಸರಕುಗಳ ಮೇಲೆ ಆಗಸ್ಟ್ 27ರಿಂದ ಶೇ 50ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.