
ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಸುಮಾರು 40 ಕೆ.ಜಿ ಸ್ಫೋಟಕ ಹೊಂದಿರುವ ಸುಧಾರಿತ ದೀರ್ಘ -ಶ್ರೇಣಿಯ ರಾಕೆಟ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಗೆಲ್ಮೋಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ರಾಕೆಟ್ ಪತ್ತೆಯಾಗಿದೆ. ರಾಕೆಟ್ ಜತೆಗೆ ರಾಕೆಟ್ ಉಡಾವಣಾ ಸ್ಟ್ಯಾಂಡ್ ಮತ್ತು ಬ್ಯಾಟರಿಯನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ವಶಪಡಿಸಿಕೊಂಡ ವಸ್ತುಗಳಲ್ಲಿ ಒಂದು ಜರ್ಮನ್ ರೈಫಲ್, ಎರಡು ಬೋಲ್ಟ್-ಆ್ಯಕ್ಷನ್ ರೈಫಲ್‌ಗಳು, ಒಂದು ಸುಧಾರಿತ ಮಾರ್ಟರ್, ಎರಡು ಹ್ಯಾಂಡ್ ಗ್ರೆನೇಡ್‌ಗಳು, ಡಿಟೋನೇಟರ್‌ಗಳು ಮತ್ತು ಒಂದು ರೇಡಿಯೋ ಸಹ ಸೇರಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.