ADVERTISEMENT

ಆತ್ಮಹತ್ಯೆಗೆ ಪ್ರಚೋದನೆ: ಹಿರಿಯ ಅರಣ್ಯಾಧಿಕಾರಿ ಬಂಧನ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 19:19 IST
Last Updated 29 ಏಪ್ರಿಲ್ 2021, 19:19 IST

ಮುಂಬೈ: ಸಹೋದ್ಯೋಗಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕಾಗಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಎಂ. ಶ್ರೀನಿವಾಸ್‌ ರೆಡ್ಡಿ ಅವರನ್ನು ಅಮರಾವತಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಅಮರಾವತಿಯಲ್ಲಿನ ಮೇಲಘಾಟ್‌ ಹುಲಿ ಸಂರಕ್ಷಿತಾರಣ್ಯಕ್ಕೆ ನಿಯೋಜಿಸಲಾಗಿದ್ದ ಮಹಿಳಾ ವಲಯ ಅರಣಾಧಿಕಾರಿ ದೀಪಾಲಿ ಚವ್ಹಾಣ್‌ (33) ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮಾರ್ಚ್‌ 25ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

‘ಲೇಡಿ ಸಿಂಗಂ’ ಎಂದೇ ಅವರು ಖ್ಯಾತಿ ಪಡೆದಿದ್ದರು. ತಮ್ಮ ಸಾವಿಗೆ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ವಿನೋದ ಶಿವಕುಮಾರ್‌ ಕಾರಣ ಎಂದು ಆತ್ಮಹತ್ಯೆಗೆ ಮುನ್ನ ಬರೆದಿದ್ದ ಪತ್ರದಲ್ಲಿ ತಿಳಿಸಿದ್ದರು. ಈ ಪತ್ರವನ್ನು ರೆಡ್ಡಿ ಅವರನ್ನು ಉದ್ದೇಶಿಸಿ ಬರೆಯಲಾಗಿತ್ತು. ಶಿವಕುಮಾರ್‌ ಅವರನ್ನು ಮಾರ್ಚ್‌ 26ರಂದು ಬಂಧಿಸಲಾಗಿತ್ತು.

ADVERTISEMENT

ಬಳಿಕ, ರೆಡ್ಡಿ ಅವರನ್ನು ವರ್ಗಾವಣೆ ಮಾಡಿ ಅಮಾನತುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.