ADVERTISEMENT

ಮುಂಬೈನಲ್ಲಿ‌ ನಿರ್ಭಯಾ ಪ್ರಕರಣದಂತೆಯೇ, ಅತ್ಯಾಚಾರಿಗಳಿಂದ ಕ್ರೌರ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2021, 12:11 IST
Last Updated 10 ಸೆಪ್ಟೆಂಬರ್ 2021, 12:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಪ್ರಕರಣದಂತೆ ಮುಂಬೈನಲ್ಲೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯವೆಸಗಲಾಗಿದೆ.

ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು, ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ಕುರಿತು 'ಇಂಡಿಯಾ ಟುಡೇ' ವರದಿ ಮಾಡಿದೆ.

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂಬೈನ ಸಾಕಿ ನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ಘಟನೆ ನಡೆದಿದೆ. ಡಿಸಿಪಿಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.