ADVERTISEMENT

ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮುರ್ಮು ಆತಿಥ್ಯದಲ್ಲಿ ಮದುವೆ ಸಮಾರಂಭ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಫೆಬ್ರುವರಿ 2025, 12:38 IST
Last Updated 2 ಫೆಬ್ರುವರಿ 2025, 12:38 IST
<div class="paragraphs"><p>ರಾಷ್ಟ್ರಪತಿ ಭವನ</p></div>

ರಾಷ್ಟ್ರಪತಿ ಭವನ

   

-ಪಿಟಿಐ ಚಿತ್ರ

ನವದೆಹಲಿ: ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರಪತಿ ಭವನವು ಮದುವೆ ಸಮಾರಂಭವೊಂದಕ್ಕೆ ಸಾಕ್ಷಿಯಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮದುವೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಒಪ್ಪಿಗೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ರಾಷ್ಟ್ರಪತಿ ಭವನವು ಭಾರತದ ರಾಷ್ಟ್ರಪತಿಗಳ ಅಧಿಕೃತ ನಿವಾಸವಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಿ ಗಣ್ಯರು ಅಧಿಕೃತ ಭೇಟಿಗಾಗಿ ದೇಶಕ್ಕೆ ಬಂದಾಗ ರಾಷ್ಟ್ರಪತಿ ಭವನದಲ್ಲಿ ಉಳಿಯುತ್ತಾರೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಅಧಿಕಾರಿ ಪೂನಂ ಗುಪ್ತಾ ಅವರು ಈ ಅಪರೂಪದ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಗುಪ್ತಾ ಅವರ ಕಾರ್ಯವೈಖರಿಯಿಂದ ಹೆಚ್ಚು ಪ್ರಭಾವಿತರಾಗಿದ್ದಾರೆ. ಹಾಗಾಗಿ ರಾಷ್ಟ್ರಪತಿ ಭವನದ ಆವರಣದಲ್ಲಿರುವ ಮದರ್ ತೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ವಿವಾಹ ಸಮಾರಂಭವನ್ನು ನಡೆಸಲು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪೂನಂ ಗುಪ್ತಾ ಯಾರು?

ಸಿಆರ್‌ಪಿಎಫ್‌ನಲ್ಲಿ ಸಹಾಯಕ ಕಮಾಂಡೆಂಟ್ ಆಗಿರುವ ಪೂನಂ ಗುಪ್ತಾ, ಪ್ರಸ್ತುತ ರಾಷ್ಟ್ರಪತಿ ಮುರ್ಮು ಅವರ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೇ 12ರಂದು ಗುಪ್ತಾ ಅವರು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ನೇಮಕಗೊಂಡಿರುವ ಸಹಾಯಕ ಕಮಾಂಡೆಂಟ್ ಅವನೀಶ್ ಕುಮಾರ್ ಅವರನ್ನು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.