ADVERTISEMENT

Manmohan Singh: ಸಿಂಗ್ ಗೌರವಾರ್ಥ 7 ದಿನ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮ ರದ್ದು

ಪಿಟಿಐ
Published 27 ಡಿಸೆಂಬರ್ 2024, 3:20 IST
Last Updated 27 ಡಿಸೆಂಬರ್ 2024, 3:20 IST
<div class="paragraphs"><p>ಮನಮೋಹನ ಸಿಂಗ್</p></div>

ಮನಮೋಹನ ಸಿಂಗ್

   

– ರಾಯಿಟರ್ಸ್ ಚಿತ್ರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಗೌರವಾರ್ಥ, ಮುಂದಿನ ಏಳು ದಿನಗಳಲ್ಲಿ ನಿಗದಿಯಾಗಿದ್ದ ಸ್ಥಾಪನಾ ದಿನ ಸೇರಿ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್‌ ತಿಳಿಸಿದೆ.

ADVERTISEMENT

‘ಮನಮೋಹನ ಸಿಂಗ್ ಅವರ ಗೌರವಾರ್ಥ ಕರ್ನಾಟಕದ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ರ್‍ಯಾಲಿಯನ್ನು ರದ್ದು ಮಾಡಲಾಗಿದೆ’ ಎಂದು ಕಾಂಗ್ರೆಸ್‌ ಪ್ರಧಾನ – ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿಯೂ ಆಗಿರುವ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

‘ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ಥಾಪನಾ ದಿನಾಚರಣೆ ಸೇರಿ ಎಲ್ಲಾ ಸಂಭ್ರಮಾಚಾರಣೆಗಳನ್ನು ಮುಂದಿನ ಏಳು ದಿನಗಳ ಮಟ್ಟಿಗೆ ರದ್ದು ಮಾಡಲಾಗಿದೆ’ ಎಂದು ಕಾಂಗ್ರೆಸ್‌ನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

‘ಎಲ್ಲಾ ಆಂದೋಲನ ಮತ್ತು ಪ್ರಚಾರ ಕಾರ್ಯಕ್ರಮಗಳೂ ರದ್ದು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಗಳು 3 ಜನವರಿ 2025 ರಂದು ಪುನರಾರಂಭಗೊಳ್ಳುತ್ತವೆ. ಈ ಶೋಕಾಚರಣೆಯ ಅವಧಿಯಲ್ಲಿ ಪಕ್ಷದ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ’ ಎಂದು ವೇಣುಗೋಪಾಲ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.