ADVERTISEMENT

1973ರಲ್ಲಿ ಸಂಸತ್ತಿಗೆ ಎತ್ತಿನ ಗಾಡಿಯಲ್ಲಿ ಸಾಗಿದ ವಾಜಪೇಯಿ;ವಿಪಕ್ಷಗಳ ತಿರುಗುಬಾಣ!

ಪಿಟಿಐ
Published 3 ಜುಲೈ 2021, 15:55 IST
Last Updated 3 ಜುಲೈ 2021, 15:55 IST
1973ರಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಸಂಸತ್ತಿಗೆ ಎತ್ತಿನ ಗಾಡಿಯಲ್ಲಿ ಸಾಗಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಚಿತ್ರ ಕೃಪೆ: ಟ್ವಿಟರ್ ಸ್ಕ್ರೀನ್‌ಶಾಟ್ @ShashiTharoor
1973ರಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಸಂಸತ್ತಿಗೆ ಎತ್ತಿನ ಗಾಡಿಯಲ್ಲಿ ಸಾಗಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಚಿತ್ರ ಕೃಪೆ: ಟ್ವಿಟರ್ ಸ್ಕ್ರೀನ್‌ಶಾಟ್ @ShashiTharoor   

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿಪೆಟ್ರೋಲ್ಬೆಲೆ ಪ್ರತಿ ಲೀಟರ್‌ಗೆ ₹100 ದಾಟಿದೆ. ಇಂಧನ ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷಗಳು ಧ್ವನಿ ಎತ್ತುತ್ತಲೇ ಇವೆ.

ಇದಕ್ಕೊಂದು ಹೊಸ ಸೇರ್ಪಡೆಯೆಂಬಂತೆ 1973ನೇ ಇಸವಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ್ದ ವಿಡಿಯೊ ತುಣುಕನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಹಂಚಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪ್ರಧಾನಿ ಇಂದಿರಾ ಗಾಂಧಿ, ಪೆಟ್ರೋಲ್‌ಗೆ ಏಳು ಪೈಸೆ ಬೆಲೆ ಏರಿಕೆ ಮಾಡಿದ್ದಾಗ ಜನ ಸಂಘ ಪಕ್ಷದ ನಾಯಕ ಅಟಲ್ ಬಿಹಾರಿ ಪಾಜಪೇಯಿ, ಪ್ರತಿಭಟನೆಯ ಸೂಚಕವಾಗಿ ಎತ್ತಿನ ಗಾಡಿಯಲ್ಲಿ ಸಾಗುವ ಮೂಲಕ ಸಂಸತ್ ಭವನಕ್ಕೆ ಆಗಮಿಸಿದ್ದರು. ವಾಜಪೇಯಿ ಅವರನ್ನು ಬೆಂಬಲಿಗರು ಘೋಷಣೆ ಕೂಗುತ್ತಾ ಬೆಂಬಲಿಸಿದ್ದರು.

ಇದನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತಿರುಗುಬಾಣವಾಗಿ ಪ್ರಯೋಗಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಶಶಿ ತರೂರ್, 1973ರಲ್ಲಿ ಪೆಟ್ರೋಲ್ ಬೆಲೆಯನ್ನು ಏಳು ಪೈಸೆ ಏರಿಸಿದಾಗ ವಿರೋಧ ಪಕ್ಷ ನಡೆಸಿದ ಪ್ರತಿಭಟನೆಯ ಅಪರೂಪದ ವಿಡಿಯೊ ತುಣುಕು ಇದಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಎತ್ತಿನ ಗಾಡಿಯ ಮೂಲಕ ಸಂಸತ್ತಿಗೆ ಆಗಮಿಸಿದ್ದರು. ಇಂದು ಭದ್ರತಾ ನಿಬಂಧನೆಗಳು ಇರುವುದರಿಂದ ಇದು ಸಾಧ್ಯವಿಲ್ಲ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ಇದೇ ವಿಡಿಯೊವನ್ನು ಹಂಚುವ ಮೂಲಕ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ.

ತಮಿಳುನಾಡು, ಕೇರಳ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹100 ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.