ADVERTISEMENT

ದೂರವಾಣಿ ಮೂಲಕ ಮೋದಿ– ಪುಟಿನ್ ಮಾತುಕತೆ: ಒಪ್ಪಂದ ಬಲವರ್ಧನೆಗೆ ಸಂಕಲ್ಪ

ಪಿಟಿಐ
Published 18 ಸೆಪ್ಟೆಂಬರ್ 2020, 10:26 IST
Last Updated 18 ಸೆಪ್ಟೆಂಬರ್ 2020, 10:26 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಭಯ ದೇಶಗಳ ನಡುವಿನ ವಿಶೇಷ ಹಾಗೂ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲವರ್ಧನೆಗೊಳಿಸುವ ಕುರಿತು ಬದ್ಧತೆಯನ್ನು ಪ್ರದರ್ಶಿಸಿದ್ದಾರೆ.

ಶುಕ್ರವಾರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ 70ನೇ ವರ್ಷದ ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ, ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಆಸಕ್ತಿ ತೋರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳನ್ನು ಬಲಪಡಿಸಲು ಬದ್ಧತೆ ಪ್ರದರ್ಶಿಸಿರುವ ಪುಟಿನ್ ಅವರಿಗೆ ಧನ್ಯವಾದ ಹೇಳಿರುವ ಮೋದಿ ಅವರು, ನಮ್ಮಿಬ್ಬರ ಬಿಡುವಿನ ಅವಧಿಯನ್ನು ನೋಡಿಕೊಂಡು, ಮುಂದೆ ನಡೆಯಲಿರುವ ಭಾರತ ಮತ್ತು ರಷ್ಯಾ ಸಮ್ಮಿತ್‌ನಲ್ಲಿ ಪಾಲ್ಗೊಳ್ಳಲು ಪುಟಿನ್ ಅವರನ್ನು ಭಾರತಕ್ಕೆ ಆಹ್ವಾನಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ADVERTISEMENT

ಇದೇ ವೇಳೆ ಇತ್ತೀಚೆಗಷ್ಟೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಾಸ್ಕೊಗೆ ಭೇಟಿ ನೀಡಿದ್ದನ್ನು ಉಭಯ ನಾಯಕರು ನೆನಪಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.