ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್) ಪಕ್ಷದ ನಾಯಕ ರಾಜ್ ಠಾಕ್ರೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಾಂಬೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಎಂಎನ್‌ಎಸ್ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ಮರಾಠಿಯೇತರ ಜನರ ಮೇಲೆ ದಾಳಿ ನಡೆಸಿದ್ದಾರೆ ಎಂಬ ವರದಿಗಳು ಪ್ರಕಟವಾಗಿರುವ ನಡುವೆಯೇ ಈ ಬೆಳವಣಿಗೆಯಾಗಿದೆ.
ವಕೀಲ ಘನಶ್ಯಾಮ್ ಉಪಾದ್ಯಾಯ ಎಂಬವರು ಪಿಐಎಲ್ ಸಲ್ಲಿಸಿದ್ದು, ಎಂಎನ್‌ಎಸ್ ಮುಖ್ಯಸ್ಥ ಹಿಂದಿ ಭಾಷಿಕರ ವಿರುದ್ಧ ಗಲಭೆಗೆ ಉತ್ತೇಜನ ನೀಡುತ್ತಿದ್ದಾರೆ ಹಾಗೂ ಭಾಷೆಯ ಆಧಾರದಲ್ಲಿ ದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ ಹಾಗೂ ಅವರ ಪಕ್ಷದ ಕಾರ್ಯಕರ್ತರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದೂ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.